ನಾಪೋಕ್ಲು, ಫೆ. ೨೨: ಪಟ್ಟಣದ ಬಸ್ ನಿಲ್ದಾಣದಲ್ಲಿ ವಾಹನಗಳ ಭರಾಟೆಯಿಂದಾಗಿ ಸಮಸ್ಯೆಗಳು ಉಲ್ಬಣಿಸಿವೆ. ವಿಶೇಷವಾಗಿ ಪಟ್ಟಣ ವ್ಯಾಪ್ತಿಯ ಶಾಲೆಗಳಿಂದ ಮಕ್ಕಳು ಮನೆಗೆ ತೆರಳುವ ಸಮಯದಲ್ಲಿ ವಾಹನಗಳ ದಟ್ಟಣೆ ಹೆಚ್ಚಿದ್ದು ಮಕ್ಕಳು, ಪೋಷಕರು ಆತಂಕಪಡುವAತಾಗಿದೆ. ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಬಸ್ ನಿಲ್ದಾಣದಲ್ಲಿ ಬಸ್ಗಳು ಹೆಚ್ಚು ಹೊತ್ತು ನಿಲುಗಡೆ ಮಾಡುವುದು ಹಾಗೂ ಎರಡೂ ಬದಿಯಲ್ಲಿ ವಾಹನಗಳ ನಿಲುಗಡೆ ಮಾಡುವುದರಿಂದ ಸಮಸ್ಯೆ ಉದ್ಭವಿಸುತ್ತಿದೆ. ಖಾಸಗಿ ವಾಹನಗಳು ಪಾರ್ಕಿಂಗ್ಗಾಗಿ ಕೆಲವು ಸಂದರ್ಭಗಳಲ್ಲಿ ಎರಡೂ ಬದಿಗಳಲ್ಲಿ ವಾಹನಗಳ ನಿಲುಗಡೆ ಮಾಡುತ್ತಿರುವುದರಿಂದ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ವಾಹನಗಳ ದಟ್ಟಣೆ ನಿಯಂತ್ರಿಸಲು ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಸಾರ್ವಜನಿಕರು ಒತ್ತಾಯಿಸಿದ್ದಾರೆ. - ದುಗ್ಗಳ