ಸೋಮವಾರಪೇಟೆ,ಫೆ.೨೩: ಇಲ್ಲಿನ ಇಂದಿರಾಗಾAಧಿ ಅಭಿಮಾನಿಗಳ ಸಂಘದ ವತಿಯಿಂದ ಮಾರ್ಚ್ ೫ರಂದು ೩೫ನೇ ವರ್ಷದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ಸಾಕಮ್ಮನ ಬಂಗಲೆ ಮುಂಭಾಗದ ಮೈದಾನದಲ್ಲಿ ಮಾರ್ಚ್ ೫ರಂದು ಪೂರ್ವಾಹ್ನ ೧೧ ಗಂಟೆಗೆ ಪಂದ್ಯಾವಳಿಗೆ ಚಾಲನೆ ನೀಡಲಾಗುವುದು. ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಯ ತಂಡಗಳು ಭಾಗವಹಿಸಲಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗ, ಕಾಲೇಜು ಮತ್ತು ಸಾರ್ವಜನಿಕ ವಿಭಾಗದಲ್ಲಿ ಪ್ರತ್ಯೇಕ ಪಂದ್ಯಗಳು ನಡೆಯಲಿವೆ ಎಂದರು.
ಪAದ್ಯಾಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ತಂಡಗಳಿಗೆ ನಗದು ಹಾಗೂ ಆಕರ್ಷಕ ಟ್ರೋಫಿ ಮತ್ತು ಆಟಗಾರರಿಗೆ ವೈಯುಕ್ತಿಕ ವಿಭಾಗದಲ್ಲಿ ಪ್ರಶಸ್ತಿಗಳನ್ನು ನೀಡಲಾಗುವುದು. ಪಂದ್ಯಾಟವನ್ನು ಕುಸುಬೂರು ಎಸ್ಟೇಟ್‌ನ ವ್ಯವಸ್ಥಾಪಕ ಕುಶಾಲಪ್ಪ ಅವರು ಉದ್ಘಾಟಿಸಲಿದ್ದು, ಕಾಂಗ್ರೆಸ್ ಮುಖಂಡ ಮಂಥರ್‌ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ವಕೀಲ ಎಚ್.ಸಿ. ನಾಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್, ನಿವೃತ್ತ ಶಿಕ್ಷಕರಾದ ನಿರ್ವಾಣಿ ಶೆಟ್ಟಿ, ಸಿಪಿಎಂಎಲ್ ಪಕ್ಷದ ಡಿ.ಸಿ. ನಿರ್ವಾಣಪ್ಪ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಸಂಜೆ ೬ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಒಕ್ಕಲಿಗರ ಸಂಘದ ರಾಜ್ಯ ಸಮಿತಿ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ವಕೀಲರಾದ ಚಂದ್ರಮೌಳಿ, ಈಶ್ವರಚಂದ್ರ ವಿದ್ಯಾಸಾಗರ್, ಒಕ್ಕಲಿಗರ ಯುವ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಲ್ಲಪ್ಪ, ಜಿ.ಪಂ ಮಾಜಿ ಸದಸ್ಯ ವಿ.ಪಿ. ಶಶಿಧರ್, ಸುಂಟಿಕೊಪ್ಪದ ಕಾಫಿ ಬೆಳೆಗಾರ ವಿನೋದ್ ಶಿವಪ್ಪ, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ಸದಸ್ಯರಾದ ಶೀಲಾ ಡಿಸೋಜ, ಸಂಜೀವ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಪಟ್ಟಣದ ಹಿರಿಯ ಛಾಯಾಗ್ರಾಹಕ ಶೇಷಪ್ಪ ಅವರನ್ನು ಸನ್ಮಾನಿಸಲಾಗುವುದು. ಪಂದ್ಯಾಟದ ಬಗೆಗಿನ ಹೆಚ್ಚಿನ ಮಾಹಿತಿಗಾಗಿ ಮೊ: ೯೪೪೯೭೯೧೭೯೧ ಹಾಗೂ ೯೪೮೩೮೪೩೩೯೫ನ್ನು ಸಂಪರ್ಕಿಸಬಹುದು ಎಂದು ನಾಗರಾಜ್ ಹೇಳಿದರು. ಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಬಿ. ರಾಜಪ್ಪ, ಸಹ ಕಾರ್ಯದರ್ಶಿ ಚನ್ನಯ್ಯ, ಸಂಚಾಲಕ ಅಜಯ್, ನಿರ್ದೇಶಕ ನರಸಿಂಹ ಉಪಸ್ಥಿತರಿದ್ದರು.