ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟç ಸಚಿವ ನವಾಬ್ ಮಲಿಕ್ ಬಂಧನ

ಮುAಬೈ, ಫೆ. ೨೩: ಮುಂಬೈ ಭೂಗತ ಜಗತ್ತಿನ ಚಟುವಟಿಕೆಗಳಿಗೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬAಧಿಸಿದAತೆ ಮಹಾರಾಷ್ಟç ಸಚಿವ, ಎನ್‌ಸಿಪಿ ನವಾಬ್ ಮಲಿಕ್ ಅವರನ್ನು ಬುಧವಾರ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬAಧಿಸಿದAತೆ ಮಹಾರಾಷ್ಟç ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಎನ್‌ಸಿಪಿ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಸತತ ೬ ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ, ಹೆಚ್ಚಿನ ವಿಚಾರಣೆಗಾಗಿ ಅವರನ್ನು ಬಂಧಿಸಿದೆ. ಜಾರಿ ನಿರ್ದೇಶನಾಲಯ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ. ನವಾಬ್ ಮಲಿಕ್ ಅವರು ಇಂದು ಬೆಳಿಗ್ಗೆ ೮ ಗಂಟೆಗೆ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದರು. ವಿಚಾರಣೆ ಬಳಿಕ ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಸಚಿವರನ್ನು ಬಂಧಿಸಿದೆ. ಅಕ್ರಮ ಆಸ್ತಿ ವ್ಯವಹಾರಗಳು ಮತ್ತು ಹವಾಲಾ ವಹಿವಾಟು, ಭೂಗತ ಜಗತ್ತಿನ ಕಾರ್ಯಾ ಚರಣೆಗಳಿಗೆ ಸಂಬAಧಿಸಿದAತೆ ಫೆಬ್ರವರಿ ೧೫ ರಂದು ನವಾಬ್ ಮಲಿಕ್ ವಿರುದ್ಧ ಮುಂಬೈನಲ್ಲಿ ಹೊಸ ಪ್ರಕರಣ ದಾಖಲಿಸಿದ ನಂತರ ಇಡಿ ಈ ಕ್ರಮ ಕೈಗೊಂಡಿದೆ. ೧೯೯೩ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಮತ್ತು ಪರಾರಿಯಾಗಿರುವ ಗ್ಯಾಂಗ್ ಸ್ಟರ್ ದಾವೂದ್ ಇಬ್ರಾಹಿಂ ಅವರ ಮೃತ ಸಹೋದರಿ ಹಸೀನಾ ಪಾರ್ಕರ್, ಸಹೋದರ ಇಕ್ಬಾಲ್ ಕಸ್ಕರ್ ಮತ್ತು ದರೋಡೆಕೋರ ಛೋಟಾ ಶಕೀಲ್‌ನ ಸೋದರ ಮಾವ ಸಲೀಂ ಖುರೇಷಿ ಅಲಿಯಾಸ್ ಸಲೀಂ ಸೇರಿದಂತೆ ೧೦ ಸ್ಥಳಗಳಲ್ಲಿ ಶೋಧ ನಡೆಸ ಲಾಗಿದೆ. ಈಗಾಗಲೇ ಜೈಲಿನಲ್ಲಿದ್ದ ಕಸ್ಕರ್‌ನನ್ನು ಕಳೆದ ವಾರ ಏಜೆನ್ಸಿ ಬಂಧಿಸಿತ್ತು.

ಸಿಎಫ್‌ಐ ಪಾತ್ರದ ಕುರಿತು ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರು, ಫೆ. ೨೩: ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ವಿವಾದಕ್ಕೆ ಸಂಬAಧಿಸಿದAತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಪಾತ್ರದ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬುಧವಾರ ಸೂಚಿಸಿದೆ. ಜನವರಿ ೧ ರಂದು ಉಡುಪಿಯ ಕಾಲೇಜೊಂದರ ಆರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡದ ಕಾಲೇಜು ಆಡಳಿತ ಮಂಡಳಿ ನಿರ್ಧಾರ ವಿರೋಧಿಸಿ ಕರಾವಳಿ ಪಟ್ಟಣದಲ್ಲಿ ಸಿಎಫ್‌ಐ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಇದಾದ ನಾಲ್ಕು ದಿನಗಳ ನಂತರ ಅವರು ತರಗತಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿದರು. ಅಲ್ಲಿಯವರೆಗೆ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕ್ಯಾಂಪಸ್‌ಗೆ ಬರುತ್ತಿದ್ದರು. ಆದರೆ ಅದನ್ನು ತೆಗೆದು ತರಗತಿಗೆ ಹಾಜರಾಗುತ್ತಿದ್ದರು ಎಂದು ಕಾಲೇಜು ಪ್ರಾಂಶುಪಾಲ ರುದ್ರೇಗೌಡ ಅವರು ತಿಳಿಸಿದ್ದಾರೆ. ಕಳೆದ ೩೫ ವರ್ಷಗಳಿಂದ ಹಿಜಾಬ್ ಧರಿಸುವ ಬಗ್ಗೆ ಸಂಸ್ಥೆಯು ಯಾವುದೇ ನಿಯಮವನ್ನು ಹೊಂದಿಲ್ಲ, ಏಕೆಂದರೆ ಅದನ್ನು ಯಾರೂ ತರಗತಿಗೆ ಒಳಗೆ ಧರಿಸುತ್ತಿರಲಿಲ್ಲ. ಈಗ ಹಿಜಾಬ್ ಬೇಡಿಕೆಯೊಂದಿಗೆ ಬಂದ ವಿದ್ಯಾರ್ಥಿಗಳಿಗೆ ಹೊರಗಿನ ಶಕ್ತಿಗಳ ಬೆಂಬಲವಿದೆ ಎಂದು ರುದ್ರಗೌಡ ಹೇಳಿದ್ದಾರೆ ಎಂದು ಬಾಲಕಿಯರ ಸರ್ಕಾರಿ ಪಿಯು ಕಾಲೇಜು ಮತ್ತು ಅದರ ಪ್ರಾಂಶುಪಾಲರು, ಶಿಕ್ಷಕರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ಎಸ್. ನಾಗಾನಂದ್ ಅವರು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಜೆ.ಎಂ. ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರನ್ನೊಳಗೊಂಡ ಪೂರ್ಣ ಪೀಠಕ್ಕೆ ತಿಳಿಸಿದ್ದಾರೆ. ೨೦೨೧ರ ಡಿಸೆಂಬರ್‌ನಲ್ಲಿ ಹಿಜಾಬ್‌ಗೆ ಅನುಮತಿ ಕೋರಿದ್ದರು. ಸಿಎಫ್‌ಐನವರು ಗಲಾಟೆ ಆರಂಭಿಸಿ, ಪ್ರತಿಭಟನೆ ಮಾಡಿದ್ದರು. ಸಿಎಫ್‌ಐ ಅಂದರೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ. ಇವರೇ ಡೋಲು ಬಾರಿಸಿ, ಹಿಜಾಬ್‌ಬೇಕೆಂದು ಪ್ರತಿಭಟಿಸುತ್ತಿದ್ದಾರೆ/ ಸಿಎಫ್‌ಐನವರೇ ಕಾಲೇಜಿನಲ್ಲಿ ಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ನಾಗಾನಂದ್ ವಾದಿಸಿದರು. ಆಗ ಮುಖ್ಯ ನ್ಯಾಯಮೂರ್ತಿ ಅವಸ್ತಿ ಅವರು ರಾಜ್ಯ ಸರ್ಕಾರಕ್ಕೆ ಇದರ ಬಗ್ಗೆ ಮಾಹಿತಿ ಇದೆಯೇ ಎಂದು ಪ್ರಶ್ನಿಸಿದರು? ಅದಕ್ಕೆ ನಾಗಾನಂದ್ ಅವರು ಇಂಟೆಲಿಜೆನ್ಸ್ ಬ್ಯೂರೋಗೆ ಮಾಹಿತಿ ಇದೆ ಎಂದು ಹೇಳಿದರು. ಆಗ ಮುಖ್ಯ ನ್ಯಾಯಮೂರ್ತಿ ಅವಸ್ತಿ ಅವರು, ಈ ಬಗ್ಗೆ ಮಾಹಿತಿ ನೀಡುವಂತೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಸೂಚಿಸಿದರು.

ಹರ್ಷ ಕೊಲೆ ಪ್ರಕರಣದಲ್ಲಿ ಈವರೆಗೆ ೮ ಮಂದಿ ಬಂಧನ

ಬೆAಗಳೂರು, ಫೆ. ೨೩: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಇದುವರೆಗೆ ೮ ಜನರ ಬಂಧನ ಅಧಿಕೃತವಾಗಿ ಆಗಿದೆ. ಇನ್ನು ಕೆಲವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಹಿನ್ನೆಲೆಯನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಅವರ ಮೇಲೆ ಕೆಲವು ಕೇಸುಗಳಿದ್ದು ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿAದು ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ಶಿವಮೊಗ್ಗ ನಗರದಲ್ಲಿ ಶುಕ್ರವಾರದವರೆಗೆ ೧೪೪ ಸೆಕ್ಷನ್ ನಿಷೇಧಾಜ್ಞೆ ಮುಂದುವರಿಸುತ್ತೇವೆ. ಅಲ್ಲಿ ಜಿಲ್ಲಾಧಿಕಾರಿಗಳು ಪರಿಸ್ಥಿತಿ ನೋಡಿಕೊಂಡು ನಿರ್ಣಯ ತೆಗೆದುಕೊಳ್ಳುತ್ತಾರೆ, ಹತ್ಯೆ ಘಟನೆಯಾದ ಬಳಿಕ ಉಂಟಾದ ಕಲ್ಲು ತೂರಾಟ, ಗಲಭೆಯಲ್ಲಿ ಆದ ಹಾನಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಹೇಳಿದರು. ಪೊಲೀಸರ ತನಿಖೆಯಿಂದ ಆರೋಪಿಗಳ ಬಗ್ಗೆ ಸಂಪೂರ್ಣ ಮಾಹಿತಿ ಹೊರಗೆ ಬರಬೇಕು. ಈ ಆರೋಪಿಗಳು ಯಾವ ಸಂಘಟನೆಗೆ ಸೇರಿದ್ದಾರೆ, ಅವರಿಗೆ ಏನು ಸಂಪರ್ಕವಿದೆ, ಎಲ್ಲಾ ಆಯಾಮಗಳಿಂದ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಶಿವಮೊಗ್ಗದ ಹರ್ಷ ಕೊಲೆ ಪ್ರಕರಣ ಸಾಮಾನ್ಯವಾದ ಕೊಲೆ ಪ್ರಕರಣ ಎಂದು ಭಾವಿಸದೆ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ಶಕ್ತಿಗಳನ್ನು ಪತ್ತೆಹಚ್ಚಿ ತನಿಖೆ ಮೂಲಕ ಹೊರಗೆ ತರಬೇಕು, ಇದರ ಹಿಂದೆ ಸಂಘಟನೆಗಳ ಕೈವಾಡದ ಸಾಧ್ಯತೆಯಿದೆ ಎಂದರು. ಇಂತಹ ಘಟನೆಗಳಾದಾಗ ಸೋಷಿಯಲ್ ಮೀಡಿಯಾ ಮೂಲಕ ಅಥವಾ ಇನ್ನಿತರ ಮಾಧ್ಯಮಗಳಲ್ಲಿ ಕೊಲೆ ಬೆದರಿಕೆ ಬರುವುದು ಸಾಮಾನ್ಯ. ಹೀಗೆ ಆದಾಗ ಸ್ಥಳೀಯ ಪೊಲೀಸರಿಗೆ ತಿಳಿಸಿದರೆ ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು. ವಿಧಾನ ಪರಿಷತ್ ಸದಸ್ಯ ಅರುಣ್ ಅವರಿಗೆ ಕೊಲೆ ಬೆದರಿಕೆ ಬಂದಿರುವ ಬಗ್ಗೆ ಲಘುವಾಗಿ ತೆಗೆದುಕೊಳ್ಳದೆ ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಸಾಮಾನ್ಯ ಜನರಿಗೂ, ಪ್ರಮುಖ ವ್ಯಕ್ತಿಗಳಿಗೂ ಸರ್ಕಾರ ಭದ್ರತೆ ಒದಗಿಸುತ್ತದೆ ಎಂದರು.