ಮಡಿಕೇರಿ, ಫೆ. ೨೪: ೨೦೨೧-೨೨ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್ಡಿ ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ. ೧೦ ಸಾವಿರದಂತೆ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
೨೦೨೧-೨೨ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ, ೨೮ ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಆನ್ಲೈನ್ ಅರ್ಜಿ ಪ್ರತಿ ಹಾಗೂ ದೃಢೀಕೃತ ದಾಖಲೆಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೇವರಾಜ ಅರಸು ಭವನ, ಮಡಿಕೇರಿ ಇಲ್ಲಿಗೆ ಸಲ್ಲಿಸುವುದು.
ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧ ರೂ. ೪.೫೦ ಲಕ್ಷ, ಪ್ರವರ್ಗ-೨ಎ, ೩ಎ, ೩ಬಿ ರೂ. ೩.೫೦ ಲಕ್ಷ. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಟ ಶೇ.೫೫ ಅಂಕಗಳನ್ನು ಪಡೆದಿರಬೇಕು. ವಿಶ್ವವಿದ್ಯಾಲಯ/ ಅಧಿಕೃತ ಸಂಸ್ಥೆಗಳಲ್ಲಿನ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿಎಚ್ಡಿ ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು.
ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ಸೈಟ್: hಣಣಠಿs://ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು. ಸಹಾಯವಾಣಿ ಸಂಖ್ಯೆ:೮೦೫೦೭೭೦೦೦೪ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ತಿಳಿಸಿದ್ದಾರೆ.