ಸೋಮವಾರಪೇಟೆ, ಫೆ. ೨೪: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಯೂರು ಗ್ರಾಮದಲ್ಲಿ ಒತ್ತುವರಿಯಾಗಿದ್ದ ಕೆರೆ ಜಾಗವನ್ನು ತಹಶೀಲ್ದಾರ್ ನೇತೃತ್ವದ ತಂಡದೊAದಿಗೆ ಕಾರ್ಯಾಚರಣೆ ನಡೆಸಿ ಒತ್ತುವರಿಯನ್ನು ತೆರವುಗೊಳಿಸಲಾಯಿತು.

ಅರೆಯೂರು ಗ್ರಾಮದ ಕೆರೆ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡು ಇತರ ಉದ್ದೇಶಗಳಿಗೆ ಬಳಸಿಕೊಂಡಿದ್ದರು. ಇದನ್ನು ಕಂದಾಯ ಇಲಾಖೆಯ ಸೂಚನೆಯಂತೆ ಸರ್ವೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳ ಆದೇಶದಂತೆ ಒತ್ತುವರಿಯಾಗಿದ್ದ ಜಾಗವನ್ನು ತೆರವು ಮಾಡಲಾಯಿತು.

ತಹಶೀಲ್ದಾರ್ ಗೋವಿಂದರಾಜು ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಂದಾಯ, ಸರ್ವೆ, ಪೊಲೀಸ್ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭಾಗವಹಿಸಿದ್ದರು. ಒತ್ತುವರಿ ತೆರವು ಜಾಗದ ದಾಖಲೆಗಳನ್ನು ಸ್ಥಳೀಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.