*ಗೋಣಿಕೊಪ್ಪ, ಫೆ. ೨೩: ಪೊನ್ನಂಪೇಟೆ ಕ್ಲಸ್ಟರ್ ಕಿರುಗೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದತ್ತಿನಿಧಿ ವಿತರಣಾ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಬಹುಮಾನ ವಿತರಣೆ ನಡೆಸಲಾಯಿತು. ವಿದ್ಯಾರ್ಥಿಗಳು ಈ ಸಂದರ್ಭ ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಗ್ರಾಮೀಣ ಭಾಗದ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಕಿರುಗೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಿರುಗೂರಿನ ವಿದ್ಯಾರ್ಥಿನಿ ಕಿರಿಯ ವಿಜ್ಞಾನಿಯಾಗಿ ಆಯ್ಕೆಯಾಗಿದ್ದ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ಶ್ಲಾಘಿಸಿದರು.
ಪೊನ್ನಂಪೇಟೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಡ ಜೀವನ್, ಎಸ್.ಡಿ.ಎಂ.ಸಿ. ಉಪಾಧ್ಯಕ್ಷÀ ಹರೀಶ್, ಮುಖ್ಯ ಶಿಕ್ಷಕ ಸಿ. ರಾಜಮ್ಮ, ಸಹಶಿಕ್ಷಕÀ ಎಂ.ಕೆ. ವೀಣಾ, ಎಂ.ಎ. ಶ್ರೀಜಾ ಹಾಗೂ ಅಕ್ಷರದಾಸೋಹ ಸಿಬ್ಬಂದಿಗಳು ಪಾಲ್ಗೊಂಡಿದ್ದರು.