ಮಡಿಕೇರಿ, ಫೆ. ೨೨: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ, ದೇವಿಗೆ ಅಲಂಕಾರ ಪೂಜೆಯೊಂದಿಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.