ಮಡಿಕೇರಿ, ಫೆ.೨೪: ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ೬.೩೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಿಂಥೆಟಿಕ್ ಬ್ಯಾಡ್ಮಿಂಟನ್ ಕೋರ್ಟ್ ಅನ್ನು ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಗುರುವಾರ ಉದ್ಘಾಟಿಸಿದರು.
ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ೨ ಸಿಂಥೆಟಿಕ್ ಆಟದ ಕೋರ್ಟ್ ಅನ್ನು ನಿರ್ಮಿಸಲಾಗಿದ್ದು, ಶಟಲ್ ಬ್ಯಾಡ್ಮಿಂಟನ್ ಆಡುವ ಮೂಲಕ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಜಿಲ್ಲಾಧಿಕಾರಿ ಗಮನ ಸೆಳೆದರು. ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚುರAಜನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಇತರರು ಇದ್ದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸುಸಜ್ಜಿತ ಸಿಂಥೆಟಿಕ್ ಬ್ಯಾಡ್ಮಿಂಟನ್ ಕೋರ್ಟ್ ನಿರ್ಮಿಸಲಾಗಿದ್ದು, ಸಾರ್ವಜನಿಕರು ಬಳಸಿಕೊಳ್ಳುವಂತೆ ತಿಳಿಸಿದರು.