ಮಡಿಕೇರಿ, ಫೆ. ೨೩ : ಸಮವಸ್ತçದ ನೆಪದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣವನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಸುನ್ನಿ ಜಂಇಯ್ಯತುಲ್ ಉಲಮಾ, ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ ಕೊಡಗು ಜಿಲ್ಲಾ ಘಟಕ, ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಘಟಕ, ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ ಕೊಡಗು ಜಿಲ್ಲಾ ಘಟಕ, ಕೊಡಗು ಸುನ್ನಿ ಯುವ ಜನ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘಟನೆಗಳ ಕಾರ್ಯಕರ್ತರು ವಿವಾದವನ್ನು ಶೀಘ್ರವೇ ಶಾಂತಿಯುತವಾಗಿ ಬಗೆಹರಿಸುವಂತೆ ಒತ್ತಾಯಿಸಿದರು.
ಈ ಸಂದರ್ಭ ಎಸ್‌ಎಸ್‌ಎಫ್ ಜಿಲ್ಲಾಧ್ಯಕ್ಷ ಶಾಫಿ ಸಹದಿ ಮಾತನಾಡಿ, ಪರೀಕ್ಷೆಗಳು ಸಮೀಪಿಸುತ್ತಿರುವಾಗಲೇ ಸಮವಸ್ತçದ ನೆಪದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರÀ ಶಿಕ್ಷಣವನ್ನು ಕಸಿದುಕೊಳ್ಳುತ್ತಿರುವುದು ಖಂಡನೀಯ ಎಂದರು. ಹಿಜಾಬ್ ವಿವಾದ ಕೋರ್ಟಿನ ಮೂಲಕ ತಾರ್ಕಿಕ ಅಂತ್ಯ ಕಾಣುವವರೆಗೂ ಮುಸ್ಲಿಂ ವಿದ್ಯಾರ್ಥಿನಿ ಯರು ತಮ್ಮ ಸಾಂವಿಧಾನಿಕ ಹಕ್ಕು, ಧಾರ್ಮಿಕ ಸ್ವಾತಂತ್ರö್ಯ ಮತ್ತು ಸ್ವಾಭಿಮಾನಕ್ಕೆ ಅನುಗುಣವಾಗಿ ಶಿರವಸ್ತçವನ್ನು ಬಳಸುತ್ತಿದ್ದು, ಸಮವಸ್ತçಕ್ಕೆ ಧಕ್ಕೆಯಾಗದಂತೆ ಇದನ್ನು ಬಳಸಲು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲೂ ಅವಕಾಶ ನೀಡಬೇಕೆಂದು ಮನವಿ ಮಾಡಿದರು.
ಈಗಾಗಲೇ ಸಮವಸ್ತç ಸಂಹಿತೆ ಜಾರಿಯಲ್ಲಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗುವಂತೆ ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕೆಲವು ಕಾಲೇಜುಗಳಲ್ಲಿ ಶಿರವಸ್ತç ತೆಗೆಯುವಂತೆ ಒತ್ತಡ ಹೇರುತ್ತಿದ್ದು, ಇಂತಹ ಸಂಸ್ಥೆಗಳ ಮುಖ್ಯಸ್ಥರ ವಿರುದ್ಧ ಕ್ರಮ ಕೈ ಗೊಳ್ಳಬೇಕು ಎಂದು ಒತ್ತಾಯಿಸಿದರು.
ಅಲ್ಲದೆ, ಕೆಲವು ಸಂಘಟನೆಗಳು ವಿದ್ಯಾರ್ಥಿಗಳನ್ನು ಪಕ್ಷದ ಪ್ರಚಾರಕ್ಕೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದ ಅವರು, ಇದರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಸ್ಲಿಂ ಜಮಾಅತ್ ನಾಯಕ ಹನೀಫ್ ಸಖಾಫಿ, ಎಸ್‌ವೈಎಸ್ ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಫೀಳ್ ಸಅದಿ, ಕೆಸಿಎಫ್ ಯುಎಇ ಖಜಾಂಚಿ ಉಸ್ಮಾನ್ ಹಾಜಿ, ಕೆ.ಎಂ.ಜೆ. ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ಹಾಜಿ, ಖಜಾಂಚಿ ಪಿ.ಎಂ. ಲತೀಫ್, ಸುನ್ನಿ ಜಂಇಯ್ಯತುಲ್ ಉಲಮಾ ಪ್ರಮುಖ ರವುಫ್ ಸಖಾಫಿ, ಎಸ್‌ವೈಎಸ್ ರಾಜ್ಯ ಕಾರ್ಯದರ್ಶಿ ಹಂಸ, ಪ್ರಮುಖರಾದ ಇಸ್ಮಾಯಿಲ್ ಸಖಾಫಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.