*ಗೋಣಿಕೊಪ್ಪ, ಫೆ. ೨೪: ಶಾಂತಿ, ಸಂಯಮ ಮತ್ತು ಸಾಮಾಜಿಕ ಕಳಕಳಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವ ಮೂಲಕ ಸಮಾಜ ಉತ್ತಮ ನಾಗರಿಕರಾಗಬೇಕು ಎಂದು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಎನ್.ಎಸ್. ಪ್ರಶಾಂತ್ ಕರೆ ನೀಡಿದರು.
ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನಡೆದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಆಯೋಜನೆಯ ಸಂಸ್ಥಾಪಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಕ್ರಿಯಾಶೀಲ ಚಟುವಟಿಕೆಯೊಂದಿಗೆ ಉತ್ತಮ ವ್ಯಕ್ತಿತ್ವ ಹೊಂದಿ ಸಮಾಜಕ್ಕೆ ಕೊಡುಗೆ ಯಾಗಬೇಕು ಎಂದು ಕಿವಿಮಾತು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬಿಳಗಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಕರ ಹಾಗೂ ಪೋಷಕರ ನಂಬಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಉತ್ತಮ ಚಟುವಟಿಕೆಯತ್ತ ಮನಸ್ಸನ್ನು ಕೇಂದ್ರೀಕರಿಸಿ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಬೇಕೆಂದರು.
ಈ ಸಂದರ್ಭ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ನೂತನ ಕಚೇರಿಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಖಾಯಂ ಪಾರಂಪರಿಕ ಪ್ರಾಥಮಿಕ ಶಾಲಾ ಕಟ್ಟಡದಲ್ಲಿ ಪ್ರಾರಂಭಿಸಲಾಯಿತು.
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಪ್ರಂಶಸನಾ ಪತ್ರವನ್ನು ನೀಡಲಾಯಿತು. ಅಲ್ಲದೇ ಕೊರೊನಾ ಸಂದರ್ಭದಲ್ಲಿ ಹಾಗೂ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸ್ವಯಂ ಸೇವಕ ಪ್ರತಿನಿಧಿಗಳಾಗಿ ಸೇವೆ ಸಲ್ಲಿಸಿದ ಸ್ಕೌಟ್ಸ್ ಮತ್ತು ಗೈಡ್ಸ್ನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರವನ್ನು ನೀಡಲಾಯಿತು.
ಕಾಳಿಮಾಡ ಮೋಟಯ್ಯ ಕಟ್ಟಡದಲ್ಲಿ ಪ್ರಾರಂಭಿಸಲಾಯಿತು.

ಕಾಳಿಮಾಡ ಮೋಟಯ್ಯ