ಸೋಮವಾರಪೇಟೆ, ಫೆ.೨೫: ಸೃಷ್ಟಿಯ ಚಿಗುರು ಕವಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಆನ್ಲೈನ್ ಕವಿಗೋಷ್ಠಿಯ ಬಹುಮಾನ ವಿತರಣೆ ಕಾರ್ಯಕ್ರಮ ತಾ. ೨೭ರಂದು (ನಾಳೆ) ಇಲ್ಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ಅಪರಾಹ್ನ ೩ ಗಂಟೆಗೆ ನಡೆಯಲಿದೆ ಎಂದು ಬಳಗದ ಅಧ್ಯಕ್ಷ ಕೆ.ಪಿ. ಸುದರ್ಶನ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಚಿಂತಕ ಹಾಗೂ ಸಾಹಿತಿಗಳಾದ ಪ್ರೊ. ಕೃಷ್ಣೇಗೌಡ ಭಾಗವಹಿಸಲಿದ್ದು, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಬಿ. ಸಂಜೀವ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಜಲಾ ಕಾಳಪ್ಪ, ಕಸಾಪ ನಿಕಟಪೂರ್ವ ಅಧ್ಯಕ್ಷ ಎಚ್.ಜೆ. ಜವರಪ್ಪ, ಮಹಿಳಾ ಸಮಾಜದ ಅಧ್ಯಕ್ಷೆ ಸುಮಾ ಸುದೀಪ್ ಪಾಲ್ಗೊಳ್ಳಲಿದ್ದಾರೆ.