ಕೊಡ್ಲಿಪೇಟೆ, ಫೆ. ೨೫: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ತಾ. ೨೮ ರಂದು ಪೂರ್ವಾಹ್ನ ೧೦.೩೦ಕ್ಕೆ ಸ್ಥಳೀಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಎಸ್.ಡಿ. ತಮ್ಮಯ್ಯ ತಿಳಿಸಿದ್ದಾರೆ.

ಕೊಡ್ಲಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ೧೦೦ ವರ್ಷಗಳನ್ನು ಪೂರೈಸಿರುವ ಹಿನ್ನೆಲೆ ಶತಮಾನೋತ್ಸವ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಶಾಸಕ ಅಪ್ಪಚ್ಚು ರಂಜನ್, ಹಿರಿಯ ಸಹಕಾರಿ ಎಂ.ಸಿ. ನಾಣಯ್ಯ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.