ಶನಿವಾರಸಂತೆ, ಫೆ. ೨೫: ಸಮೀಪದ ಕೊಡ್ಲಿಪೇಟೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ತಾ. ೨೮ ರಂದು ಬೆಳಿಗ್ಗೆ ೧೦.೩೦ಕ್ಕೆ ಶ್ರೀಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಶತಮಾನೋತ್ಸವ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಮಾರಂಭವನ್ನು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಲಿದ್ದು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಡಿ. ತಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಮಾಜಿ ಮಂತ್ರಿ ಎಂ.ಸಿ. ನಾಣಯ್ಯ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಕೆಡಿಸಿಸಿ ನಿರ್ದೇಶಕರಾದ ಬಿ.ಕೆ. ಚಿಣ್ಣಪ್ಪ, ಬಿ.ಡಿ. ಮಂಜುನಾಥ್, ಎಸ್.ಬಿ. ಭರತ್‌ಕುಮಾರ್, ಸಹಕಾರ ಸಂಘಗಳ ಉಪ ನಿಬಂಧಕ ಬಿ.ಕೆ. ಸಲೀಂ, ಸಹಾಯಕ ನಿಬಂಧಕ ಹೆಚ್.ಡಿ. ರವಿಕುಮಾರ್ ಪಾಲ್ಗೊಳ್ಳಲಿದ್ದು, ಸಂಘದ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸ್ಥಳ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್.ಡಿ. ತಮ್ಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.