ಮಡಿಕೇರಿ, ಫೆ. ೨೫: ಮುಂಬರಲಿರುವ ರಾಜ್ಯ ಬಜೆಟ್‌ನಲ್ಲಿ ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಕೊಡವ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗಿದೆ.
ಬೆಂಗಳೂರು ಕೊಡವ ಸಮಾಜದ ಕೆಲವು ಸದಸ್ಯರು ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಎಂ.ಎಲ್.ಸಿ. ಸುಜಾ ಕುಶಾಲಪ್ಪ ಅವರುಗಳ ಸಹಿತವಾಗಿ ಈ ಕುರಿತು ಮನವಿ ಸಲ್ಲಿಸಿ ಸಮಾಲೋಚನೆ ನಡೆಸಿದರು.