ಚೆಟ್ಟಳ್ಳಿ, ಫೆ. ೨೬: ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘ, ಜನಪರ ಹೋರಾಟ ಸಮಿತಿ ಚೆಟ್ಟಳ್ಳಿ, ವೀರಾಂಜನೇಯ ಯುವಕ ಸಂಘ ಚೆಟ್ಟಳ್ಳಿ ಹಾಗೂ ವಿನಾಯಕ ದೇವಾಲಯ ಸಮಿತಿ ಕೂಡ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ದ್ವಿತೀಯ ವರ್ಷದ ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮಾರ್ಚ್ ೧ ರ ಸಂಜೆ ೫.೩೦ ಗಂಟೆಗೆ ಶ್ರೀ ವಿನಾಯಕ, ಶ್ರೀ ಪಶುಪತಿನಾಥ, ಶ್ರೀ ಕಾವೇರಿ ಮಾತೆ, ಶ್ರೀ ಕೃಷ್ಣ, ಗೋಮಾತೆ, ಶ್ರೀ ಆಂಜನೇಯ ಮತ್ತು ಶ್ರೀ ಮಹಾವಿಷ್ಣು ಮೂರ್ತಿಗೆ ಮಹಾ ಮಂಗಳಾರತಿ ನಡೆಯಲಿದೆ. ಸಂಜೆ ೭ ಗಂಟೆಯಿAದ ಗೋಣಿಕೊಪ್ಪಲಿನ ಗಾಯಕ ಅನ್ವಿತ್ ಕುಮಾರ್ ಸಿ.ವಿ. ತಂಡದಿAದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ೮.೩೦ ಗಂಟೆಗೆ ಪ್ರಸಾದ ಹಾಗೂ ಅನ್ನಸಂತರ್ಪಣಾ ಕಾರ್ಯಕ್ರಮ ನೆರವೇರಲಿದೆ ಎಂದು ಅವರು ತಿಳಿಸಿದ್ದಾರೆ.