ಕುಶಾಲನಗರ, ಫೆ. ೨೬: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ತೊರೆನೂರು ಶ್ರೀ ಶನೈಶ್ವರ ಸ್ವಾಮಿ ದೇವಾಲಯದಲ್ಲಿ ಜಾನಪದ ಉತ್ಸವ, ಜನಪದ ಗೀತಗಾಯನ ಕಾರ್ಯಕ್ರಮ ಮತ್ತು ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಕೆ.ಎಸ್ ಕೃಷ್ಣೇಗೌಡ ತಿಳಿಸಿದ್ದಾರೆ.

ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವರಾತ್ರಿ ಅಂಗವಾಗಿ ದೇವಾಲಯದಲ್ಲಿ ಮಾರ್ಚ್ ಒಂದರAದು ಬೆಳಿಗ್ಗೆ ಗಣಪತಿ ಹೋಮ, ನವಗ್ರಹ ಪೂಜೆ, ಸ್ವಾಮಿಗೆ ವಿವಿಧ ಅಭಿಷೇಕ ನಂತರ ಸತ್ಯನಾರಾಯಣ ಪೂಜೆ ನಡೆಯಲಿದೆ. ನಂತರ ದೇವಾಲಯದ ಆವರಣದಲ್ಲಿ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮಿಗಳು ಹಾಗೂ ಶ್ರೀ ಬಾಲಗಂಗಾಧರ ಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಂತರ ಮುತ್ತಿನಹಾರ ವಾದ್ಯ ಗೋಷ್ಠಿ ಕಲಾವಿದರ ಸಂಘದ ವತಿಯಿಂದ ಜಾನಪದ ನೃತ್ಯ ಹಾಗೂ ಜಾನಪದ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದರು.

ಅAದು ಸಂಜೆ ೮ ಗಂಟೆಗೆ ದೇವಾಲಯ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಪಿರಿಯಾಪಟ್ಟಣ ಕ್ಷೇತ್ರ ಶಾಸಕ ಕೆ. ಮಹದೇವ್ ನೆರವೇರಿಸಲಿದ್ದಾರೆ. ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಸಿ.ಎಸ್. ಮಾದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಸೇನಾನಿಗಳು ಮತ್ತು ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ತೊರೆನೂರು ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಟಿ.ಕೆ. ಪಾಂಡುರAಗ ಇದ್ದರು.