.jpeg)
ಮಡಿಕೇರಿ, ಫೆ. ೨೭: ರಾಷ್ಟಿçÃಯ ಪಲ್ಸ್ ಪೋಲಿಯೋ ಅಭಿಯಾನ ಪ್ರಯುಕ್ತ ನಗರದ ಜಿಲ್ಲಾ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಾರ್ಡ್ನಲ್ಲಿ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಮತ್ತು ಶಾಸಕ ಕೆ.ಜಿ. ಬೋಪಯ್ಯ ಅವರು ಐದು ವರ್ಷ ದೊಳಗಿನ ಮಕ್ಕಳಿಗೆ ಪೋಲಿಯೋ ನಿರೋಧಕ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಪೋಲಿಯೋ ನಿರ್ಮೂಲನೆ ಮಾಡುವಲ್ಲಿ ೧೯೯೫ ರಿಂದ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಕೊಡಿಸುವಂತಾ ಗಬೇಕು ಎಂದು ಕರೆ ನೀಡಿದರು.
ಈ ಹಿಂದೆ ವರ್ಷಕ್ಕೆ ಎರಡು ಬಾರಿ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗುತ್ತಿತ್ತು, ಕೋವಿಡ್ ೧೯ ನಂತರ ವರ್ಷಕೊಮ್ಮೆ ಕಾರ್ಯಕ್ರಮ ನಡೆಯುತ್ತಿದ್ದು, ಅಭಿಯಾನಕ್ಕೆ ಎಲ್ಲರೂ ಕೈಜೋಡಿಸು ವಂತೆ ಅವರು ಮನವಿ ಮಾಡಿದರು.
ಇತ್ತೀಚೆಗೆ ರಾಷ್ಟçದಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ, ಆದರೂ ಪೋಲಿಯೋ ಬರದಂತೆ ತಡೆಯುವುದು ಅತಿಮುಖ್ಯ. ಆದ್ದರಿಂದ ಪೋಲಿಯೋ ಅಭಿಯಾನ ವನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ಅವರು ಮಾತನಾಡಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸಬೇಕು ಎಂದು ಕೋರಿದರು.
ಪಲ್ಸ್ ಪೋಲಿಯೋ ಹನಿ ಹಾಕಿಸದಿರುವ ಮಕ್ಕಳಿಗೆ ಗ್ರಾಮೀಣ ಪ್ರದೇಶದಲ್ಲಿ ಫೆಬ್ರವರಿ, ೨೮, ಮಾರ್ಚ್ ೧ ರಂದು ಹಾಗೆಯೇ ನಗರ/ ಪಟ್ಟಣ ಪ್ರದೇಶಗಳಲ್ಲಿ ಫೆಬ್ರವರಿ, ೨೮, ಮಾರ್ಚ್ ೧ ಮತ್ತು ೨ ರಂದು ಮನೆ ಮನೆಗೆ ಭೇಟಿ ನೀಡಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲಾಗುವುದು ಎಂದರು.
ಕೊಡಗು ಜಿಲ್ಲೆಯಲ್ಲಿ ೫ ವರ್ಷ ದೊಳಗಿನ ಮಕ್ಕಳ ಒಟ್ಟು ೪೨,೩೭೫ ಗುರುತಿಸಿದ್ದು, ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ ೩೭,೯೭೫ ಮಕ್ಕಳು ಹಾಗೂ ನಗರ ಪ್ರದೇಶದಲ್ಲಿ ೪,೪೦೦ ಮಕ್ಕಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಗೋಪಿನಾಥ್ ಅವರು ಮಾತನಾಡಿ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಪಡೆಯ ಲಾಗಿದೆ. ಗಿರಿಜನ ಹಾಡಿ ಪ್ರದೇಶಗಳು ಸೇರಿದಂತೆ ಲೈನ್‌ಮನೆ ಗಳು, ಎಲ್ಲಾ ಕಡೆಗಳಲ್ಲಿ ೫ ವರ್ಷದೊಳ ಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡಲಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಡಾ. ಆನಂದ, ಡಾ. ವಿಶಾಲ್ ಕುಮಾರ್, ಡಾ. ಪುರುಷೋತ್ತಮ, ಡಾ. ಹರ್ಷ ಇತರರು ಇದ್ದರು.ಪೊನ್ನಂಪೇಟೆಯ ಶಿವ ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹನಿ ಹಾಕುವ ಕಾರ್ಯಕ್ರಮ ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ನರಸಿಂಹಮೂರ್ತಿ ಮಗುವಿಗೆ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಆಶಾ ಕಾರ್ಯಕರ್ತೆಯರಾದ ಪೊನ್ನಮ್ಮ, ಪ್ರಶಾಂತಿ, ಅಂಗನವಾಡಿ ಕಾರ್ಯಕರ್ತೆಯರಾದ ಪುಷ್ಪ ಹಾಗೂ ಫಮೀದ ಹಾಜರಿದ್ದರು.ಕಡಂಗ ಅರಪಟ್ಟು ಅಂಗನವಾಡಿ ಕೇಂದ್ರದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ವಿನೋದ್ ಅವರು ಚಾಲನೆ ನೀಡಿದರು.ಅರಪಟ್ಟು ಗ್ರಾಮದ ಎಲ್ಲಾ ೫ ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಹಾಗೂ ಲಸಿಕೆಯಿಂದ ಆಗುವ ಪ್ರಯೋಜನದ ಬಗ್ಗೆ ಮಾಹಿತಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅರೋಗ್ಯ ಅಧಿಕಾರಿ ಶೈಲಜ, ಮುರುಳಿಧರ್ ಮತ್ತು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.ಸುAಟಿಕೊಪ್ಪ: ರಾಷ್ಟಿçÃಯ ಪಲ್ಸ್ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಸ್‌ನಿಲ್ದಾಣದ ಕೇಂದ್ರದಲ್ಲಿ ಮಕ್ಕಳಿಗೆ ಪಲ್ಸ್ಪೋಲಿಯೋ ಹನಿಯನ್ನು ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ ಮಹೇಶ್ ಅವರು ಮಗುವಿಗೆ ನೀಡುವ ಮೂಲಕ ಚಾಲನೆ ನೀಡಿದರು.
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ ಮಹೇಶ್, ವೈದ್ಯಾಧಿಕಾರಿಗಳಾದ ಶ್ರೇಯಸ್, ರಶ್ಮಿ, ಆರೋಗ್ಯ ಶೂಶ್ರಷಕಿ ಚಿತ್ರಾ, ಆರೋಗ್ಯ ಸಹಾಯಕಿ ಪ್ರೇಮ, ದಾದಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾ.ಪಂ.ಸದಸ್ಯೆ ನಾಗರತ್ನ ಸುರೇಶ್ ಹಾಗೂ ಮತ್ತಿತರರು ಇದ್ದರು. ಗ್ರಾಮದ ಚೆತ್ತುಕಾಯದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಗ್ರಾ.ಪಂ.ಸದಸ್ಯ ಕೆ.ಎ. ನಾರಾಯಣ ಅವರು ಲಸಿಕೆ ನೀಡುವುದರ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.ಕಡಂಗ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಕೋಟುಪರಂಬು ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮೇವಡ ಗಿರೀಶ್‌ರವರು ಚಾಲನೆ ನೀಡಿದರು.
ಕಾಕೋಟುಪರಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ೫ ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಹಾಗೂ ಲಸಿಕೆಯಿಂದ ಆಗುವ ಪ್ರಯೋಜನದ ಬಗ್ಗೆ ಮಾಹಿತಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅರೋಗ್ಯ ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.ಸುAಟಿಕೊಪ್ಪ: ರಾಷ್ಟಿçÃಯ ಪಲ್ಸ್ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಸ್‌ನಿಲ್ದಾಣದ ಕೇಂದ್ರದಲ್ಲಿ ಮಕ್ಕಳಿಗೆ ಪಲ್ಸ್ಪೋಲಿಯೋ ಹನಿಯನ್ನು ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ ಮಹೇಶ್ ಅವರು ಮಗುವಿಗೆ ನೀಡುವ ಮೂಲಕ ಚಾಲನೆ ನೀಡಿದರು.
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ ಮಹೇಶ್, ವೈದ್ಯಾಧಿಕಾರಿಗಳಾದ ಶ್ರೇಯಸ್, ರಶ್ಮಿ, ಆರೋಗ್ಯ ಶೂಶ್ರಷಕಿ ಚಿತ್ರಾ, ಆರೋಗ್ಯ ಸಹಾಯಕಿ ಪ್ರೇಮ, ದಾದಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾ.ಪಂ.ಸದಸ್ಯೆ ನಾಗರತ್ನ ಸುರೇಶ್ ಹಾಗೂ ಮತ್ತಿತರರು ಇದ್ದರು. ಶನಿವಾರಸಂತೆ: ಕೊಡ್ಲಿಪೇಟೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೇಮಾವತಿ ರೋಟರಿ ಸಂಸ್ಥೆ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಆರೋಗ್ಯ ಕೇಂದ್ರದ ವೈದ್ಯೆ ಡಾ. ತುಂಗಾ, ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೇಂದ್ರದ ಸಿಬ್ಬೀದ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂತ್‌ಗಳಲ್ಲಿ ೫ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಕಾರ್ಯದಲ್ಲಿ ತಮ್ಮನ್ನು ತೊಡಿಸಿಕೊಂಡಿದ್ದರು.
ರೋಟರಿ ಸಂಸ್ಥೆ ಅಧ್ಯಕ್ಷ ದಿನೇಶ್, ಕಾರ್ಯದರ್ಶಿ ಉಮೇಶ್, ರೋಟೇರಿಯನ್‌ಗಳಾದ ದುಶ್ಯಂತ್, ದಿವಾಕರ್, ಆರೋಗ್ಯ ಸಹಾಯಕ ಹಾಜರಿದ್ದರು. ಸಂಸ್ಥೆ ವತಿಯಿಂದ ೭೦ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
ಕುಶಾಲನಗರ: ಕುಶಾಲನಗರದ ಮಹಿಳಾ ಸಮಾಜದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ನಡೆಯಿತು. ಕುಶಾಲನಗರ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಬಿ.ಜೈವರ್ಧನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತರಾದ ಎಚ್.ಆರ್.ಸುಚಿತ್ರ, ಆಶಾ ಕಾರ್ಯಕರ್ತರಾದ ನಂದಿನಿ, ನಿರ್ಮಲ, ಆರ್.ಬಿ.ಎಸ್.ಕೆ. ನಮೃತಾ ಇದ್ದರು.