ಮಡಿಕೇರಿ, ಫೆ. ೨೭: ನಗರದ ದಾಸವಾಳ ಬಡಾವಣೆೆಯಲ್ಲಿರುವ ಶ್ರೀ ವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ವಿಶೇಷ ಪೂಜಾ ಕೈಂಕರ್ಯವು ಮಾ.೧ ರಂದು ನಡೆಯಲಿದೆ.
ಅಂದು ಬೆಳಿಗ್ಗೆ ೭ ಗಂಟೆಗೆ ಶಿವರಾತ್ರಿ ಪ್ರಯುಕ್ತ ಮಡಿವಾಳರ ಅಭಿವೃದ್ಧಿ ಸಂಘದ ಸಹಭಾಗಿತ್ವದಲ್ಲಿ ಮಹಾಗಣಪತಿ ಹೋಮ ನಡೆಯಲಿದ್ದು, ಬೆಳಿಗ್ಗೆ ೯ ಗಂಟೆಗೆ ನಗರದ ಗಣಪತಿ ಬೀದಿಯಿಂದ ಬನ್ನಿಮಂಟಪ, ಮಹದೇವಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಜೂನಿಯರ್ ಕಾಲೇಜು ರಸ್ತೆ ಮಾರ್ಗವಾಗಿ ದೇವಾಲಯಕ್ಕೆ ವೀರಭದ್ರ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಲಿದೆ.
ಮಧ್ಯಾಹ್ನ ೧೨ ಗಂಟೆಗೆ ಮಹಾಪೂಜೆ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ೬ ರಿಂದ ಮರುದಿನ ಬೆಳಿಗ್ಗೆ ೫ ಗಂಟೆಯವರೆಗೆ ಜಾಮ ಪೂಜೆ ಜರುಗಲಿದೆ. ಜಾಗರಣೆ ಪ್ರಯುಕ್ತ ರಾತ್ರಿ ೮ ಗಂಟೆಗೆ ರಂಗಪೂಜೆ, ೧೦ ಗಂಟೆಗೆ ಸಭಾ ಕಾರ್ಯಕ್ರಮದ ನಂತರ ಮರುದಿನ ಬೆಳಿಗ್ಗೆ ೫ ಗಂಟೆವರೆಗೆ ನೃತ್ಯ ಸ್ಪರ್ಧೆ ಕಾರ್ಯಕ್ರಮಗಳು ನಡೆಯಲಿವೆÉ.