ಮಡಿಕೇರಿ, ಫೆ. ೨೭: ಕನ್ನಡ ಪುಸ್ತಕ ಪ್ರಾಧಿಕಾರವು ಮಾರ್ಚ್ ೧೦ ರಿಂದ ೧೫ ರವರೆಗೆ ಆರು ದಿನಗಳ ಕಾಲ “ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-೨೦೨೨”ನ್ನು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಿದೆ.

ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವ ರಾಜ್ಯದ ಎಲ್ಲಾ ಕನ್ನಡ ಪುಸ್ತಕ ಪ್ರಕಾಶಕರು/ ಮಾರಾಟಗಾರರು ಅರ್ಜಿ ಸಲ್ಲಿಸಿ ಮಾರಾಟ ಮಳಿಗೆಯನ್ನು ಕಾಯ್ದಿರಿಸಲು ಕೋರಿದೆ. ಅರ್ಜಿ ಸಲ್ಲಿಸಲು ಮಾರ್ಚ್ ೮ ರವರೆಗೆ ಅವಕಾಶ ಕಲ್ಪಿಸಿದೆ. ನಂತರ ಬಂದ ಅರ್ಜಿ ಪರಿಗಣಿಸಲಾಗುವುದಿಲ್ಲ.

ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾಯ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ ತಿತಿತಿ.ಞಚಿಟಿಟಿಚಿಜಚಿ ಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ನಲ್ಲಿ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ನಲ್ಲಿ ಅಥವಾ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-೫೬೦ ೦೦೨ ದೂ: ೦೮೦-೨೨೪೮೪೫೧೬ / ೨೨೧೦೭೭೦೪ ಅನ್ನು ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.