ಮಡಿಕೇರಿ, ಫೆ. ೨೬: ಕರ್ನಾಟಕ ಸರಕಾರದ ಆದೇಶ ಸಂಖ್ಯೆ: ಒಇ:೨೧೯:ಪಿಪಿಇ:೨೦೨೧ ದಿನಾಂಕ ೧೫.೨.೨೦೨೨ ರ ಅನ್ವಯ ಕೊಡಗು ಜಿಲ್ಲೆಯಲ್ಲಿನ ವೀರಾಜಪೇಟೆಯ ಸಿ.ಜೆ. (ಕಿ.ವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಖಾಲಿ ಇರುವ ಒಂದು ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಯಲ್ಲಿ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಸಹಾಯಕ ಸರಕಾರಿ ಅಭಿಯೋಜಕರಾಗಿ ಕೆಲಸ ನಿರ್ವಹಿಸಲು ಆಸಕ್ತಿಯುಳ್ಳ ಅರ್ಹ ವಕೀಲರುಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕ ಮಾರ್ಚ್ ೭ಕ್ಕೆ ೩ ವರ್ಷಗಳಿಗೆ ಕಡಿಮೆ ಇಲ್ಲದಂತೆ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಹ ಅಭ್ಯರ್ಥಿಗಳು, ಸದಸ್ಯ ಕಾರ್ಯದರ್ಶಿ, ಗುತ್ತಿಗೆ ಆಧಾರದ ಸಹಾಯಕ ಸರಕಾರಿ ಅಭಿಯೋಜಕರ ನೇಮಕಾತಿ ಸಮಿತಿ ಮತ್ತು ಸರಕಾರಿ ಅಭಿಯೋಜಕರು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ಮಾರ್ಚ್ ೩ ರ ಸಂಜೆ ೫ ಗಂಟೆಯೊಳಗೆ ಅರ್ಜಿಯನ್ನು ಪೂರ್ಣ ಲಗತ್ತುಗಳೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸರಕಾರಿ ಅಭಿಯೋಜಕರು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.