ಕೂಡಿಗೆ, ಫೆ. ೨೮: ತೊರೆನೂರು ಗ್ರಾಮದಲ್ಲಿರುವ ಶ್ರೀ ಶನೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ದೇವಾಲಯದ ಆವರಣದಲ್ಲಿ ೧೦ ಗಂಟೆಗೆ ಗಣಪತಿ ಹೋಮ, ನವಗ್ರಹ ಪೂಜೆ, ಸ್ವಾಮಿಗೆ ವಿವಿಧ ಅಭಿಷೇಕ ಸೇರಿದಂತೆ ಶ್ರೀ ಸತ್ಯನಾರಾಯಣ ಸ್ವಾಮಿ ಮಹಾಪೂಜೆ, ವಿವಿಧ ಪೂಜಾ ಕೈಂಕರ್ಯಗಳು ತಾ. ೧ ರಂದು (ಇಂದು) ನಡೆಯಲಿದೆ ಎಂದು ದೇವಾಲಯ ಪ್ರಮುಖರಾದ ಕೆ.ಎಸ್. ಕೃಷ್ಣಗೌಡ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕರ್ನಾಟಕ ರತ್ನ ಪದ್ಮವಿಭೂಷಣ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮಿಗಳÀ ಹಾಗೂ ಬಾಲಗಂಗಾಧರ ನಾಥ ಸ್ವಾಮಿಗಳ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಹಾಗೂ ನುಡಿನಮನ ಕಾರ್ಯಕ್ರಮಗಳು ನಡೆಯಲಿವೆ.