ಕೂಡಿಗೆ, ಫೆ. ೨೮: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ಆವರಣದಲ್ಲಿ ೧ ರಂದು (ಇಂದು) ಮಹಾಶಿವರಾತ್ರಿ ಹಬ್ಬ ಆಚರಣೆ ಕಾರ್ಯಕ್ರಮ ನಡೆಯಲ್ಲಿದೆ.
ತಾ. ೧ ರಂದು ದೇವಾಲಯದಲ್ಲಿ ಮಹಾಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ರುದ್ರಹೋಮ, ರುದ್ರಾಭಿಷೇಕ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.
ಸಂಜೆ ೪ ಗಂಟೆಗೆ ಶ್ರೀ ಉಮಾಮಹೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ಅಲಂಕೃತವಾದ ಭವ್ಯ ಮಂಟಪದಲ್ಲಿ ಕುಳ್ಳಿರಿಸಿ ವಾದ್ಯ ಗೋಷ್ಠಿಯೊಂದಿಗೆ ಕ್ಷೇತ್ರದ ಪ್ರದಕ್ಷಿಣೆ, ನಂತರ ಹುದುಗೂರು ಗ್ರಾಮ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಲಿದೆ ಎಂದು ಚಾಮಿ ತಿಳಿಸಿದ್ದಾರೆ.