ಮಡಿಕೇರಿ, ಮಾ. ೨ : ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮ ಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಾರ್ಥ ವಾಗಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಈ ಬಾರಿ ತಾ. ೪ ರಂದು ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಮುಂಭಾಗ ದಲ್ಲಿ ನೆರವೇರಲಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಮುದ್ದಂಡ ಬಿ.ದೇವಯ್ಯ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೋವಿಡ್ ಕಾರಣದಿಂದ ಸರ್ಕಾರದ ಮಾರ್ಗಸೂಚಿಯಂತೆ ಮುಂದೂಡಲಾಗಿದ್ದ ಪೂಜೆಯನ್ನು ತಾ. ೪ರಂದು ಶ್ರೀ ಭಗಂಡೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಟ್ರಸ್ಟ್ನ ಜಾಗದಲ್ಲಿ ಬೆಳಿಗ್ಗೆ ೭ ಗಂಟೆಯಿAದ ಆರಂಭಿಸ ಲಾಗುವುದು. ಗಣಪತಿ ಹೋಮ, ಚಂಡಿಕಾ ಹೋಮ, ಸತ್ಯನಾರಾಯಣ ಪೂಜೆ ಹಾಗೂ ಶ್ರೀ ಭಗಂಡೇಶ್ವರ ದೇವರ ಸನ್ನಿಧಿಯಲ್ಲಿ ಶಥರುದ್ರಾಮಂತ್ರ ಪಠಣ ನಡೆಸಲಾಗುವುದು. ಪುತ್ತೂರಿನ ತಂತ್ರಿಗಳಾದ ಕೆಮ್ಮಂಜೆ ಸುಬ್ರಮಣ್ಯ ಬೆಳ್ಳುಪ್ಪರಾಯರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.