ಮಡಿಕೇರಿ ಮಾ.೨ : ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ತಾ. ೬ ರಂದು ೨೦೨೦-೨೧ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ನಡೆಯಲಿದೆ.

ಅಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕೊಡಗು ಗೌಡ ವಿದ್ಯಾಸಂಘದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕರಾದ ಕೆದಂಬಾಡಿ ಎಸ್.ತಿಮ್ಮಯ್ಯ, ತೆಕ್ಕಡೆ ಮುತ್ತಣ್ಣ, ದೇವಜನ ನಾಣಯ್ಯ ಹಾಗೂ ನಿವೃತ್ತ ಬ್ಯಾಂಕ್ ಅಧಿಕಾರಿ ಮಲೆಬಾವು ರವಿ ಪಾಲ್ಗೊಳ್ಳಲಿದ್ದಾರೆ.