ಪೊನ್ನಂಪೇಟೆ: ಪೊನ್ನಂಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಪೊನ್ನಂಪೇಟೆ ಮಾತಾಯಿ ಪುರುಷರ ಸ್ವ- ಸಹಾಯ ಸಂಘದ ವತಿಯಿಂದ ಬೆಳಗ್ಗೆ ರುದ್ರಾಭಿಷೇಕ ಹಾಗೂ ರಾತ್ರಿ ಮಹಾರುದ್ರ ಹೋಮ ನಡೆಸಲಾಯಿತು. ಶಿವರಾತ್ರಿಯ ಪ್ರಯುಕ್ತ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಛತಾ ಕಾರ್ಯವನ್ನು ನಿರ್ವಹಿಸುವ ಪೌರಕಾರ್ಮಿಕರಾದ ಪರಮೇಶ, ಶಂಕರ, ಜ್ಯೋತಿ, ಮಾದೇವ, ಉಮಾ, ನಂಜುAಡ, ನಾಗಿ, ಪಾಪಮ್ಮ, ಗೌರಿ ಹಾಗೂ ಮುತ್ತಪ್ಪ ಅವರನ್ನು ಮಾತಾಯಿ ಪುರುಷದ ಸ್ವ- ಸಹಾಯ ಸಂಘದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭ ಸಂಘದ ಅಧ್ಯಕ್ಷ ಕರುಣಾಕರ, ಗೌರವಾಧ್ಯಕ್ಷ ಸಿ.ವಿ.ವಿನೋದ್, ಖಜಾಂಚಿ ಸುದರ್ಶನ್, ಸದಸ್ಯರಾದ ಎಂ.ಬಿ.ಅನೀಸ್, ಟಿ.ವಿ.ಸುರೇಶ್, ಎಂ.ಎA.ಸಾದಿಕ್, ಕೆ.ವಿ.ವಿನು, ಹರೀಶ್, ಅನೀಫ್, ಉಮ್ಮರ್, ಟಿ.ವಿ.ಮುರುಳಿ, ಎನ್.ಮಂಜು, ಮಹಮದ್, ರುದ್ರಪ್ಪ, ಕುಟ್ಟಪ್ಪ, ಅಣ್ಣಪ್ಪ, ಶೇಖರ್, ಹೆಚ್.ವಿ.ಸುರೇಶ್, ಸತೀಶ್ ಹಾಜರಿದ್ದರು. ಅನಿಸ್ ಸ್ವಾಗತಿಸಿ, ಟಿ.ವಿ.ಸುರೇಶ್ ವಂದಿಸಿದರು. ಭಕ್ತಾದಿಗಳಿಗೆ ಸಂಘದ ಅನ್ನಸಂತರ್ಪಣೆ ನಡೆಯಿತು.
ಕುಶಾಲನಗರ: ಶಿವರಾತ್ರಿ ಅಂಗವಾಗಿ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ಶಿವದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಕುಶಾಲನಗರ ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬೆಳಗಿನಿಂದಲೇ ಅಭಿಷೇಕ, ಬಿಲ್ವಾರ್ಚನೆ, ನೈವೇದ್ಯ ನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಡೆಯಿತು.
ಗುಡ್ಡೆಹೊಸೂರು ಸಮೀಪದ ಅತ್ತೂರು ಗ್ರಾಮದ ಪಂಚಲಿAಗೇಶ್ವರ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ಪೂಜಾ ಕಾರ್ಯ ಕ್ರಮಗಳು ಜರುಗಿದವು. ಭಕ್ತರಿಗೆ ಅನ್ನದಾನ ಕಾರ್ಯಕ್ರಮ ಏರ್ಪಡಿಸ ಲಾಗಿತ್ತು. ಕುಶಾಲನಗರ ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ದೀಪೋತ್ಸವ ಕಾರ್ಯಕ್ರಮ ನಡೆಯಿತು. ಗಂಧದಕೋಟಿ ಬಳಿ ಇರುವ ಐತಿಹಾಸಿಕ ಶಿವನ ವಿಗ್ರಹಕ್ಕೆ ವಿಶೇಷ ಪೂಜಾ ಕಾರ್ಯಕ್ರಮ ನಂತರ ಭಕ್ತಾದಿಗಳಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಕಾವೇರಿ ನಿಸರ್ಗಧಾಮ ಬಳಿ ಇರುವ ೭ ಹೊಳೆ ಸೇರುವ ಪ್ರದೇಶದಲ್ಲಿ ಇರುವ ಹೊಳೆರಾಮಪ್ಪನ ಗುಡಿಯಲ್ಲಿ ಶಿವರಾತ್ರಿ ಅಂಗವಾಗಿ ಸ್ಥಳೀಯ ಗ್ರಾಮಸ್ಥರು ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡರು. ಕೊಪ್ಪ ಗ್ರಾಮದ ಸಿಡಿಲು ಮಲ್ಲಿಕಾರ್ಜುನ ದೇವಾಲಯ ದಲ್ಲಿ ಬೆಳಗಿನಿಂದಲೇ ದೇವರಿಗೆ ಅಭಿಷೇಕ, ಬಿಲ್ವಾರ್ಚನೆ ನಂತರ ಮಹಾ ಮಂಗಳಾರತಿ ತೀರ್ಥಪ್ರಸಾದ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪೇರೂರು ಇಗ್ಗುತ್ತಪ್ಪ ದೇವಾಲಯ
ನಾಪೋಕ್ಲು: ಪಾಲೂರಿನ ಮಹಾಲಿಂಗೇಶ್ವರ ದೇವಾಲಯ, ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವಾಲಯ, ಪೇರೂರು ಗ್ರಾಮದ ಇಗ್ಗುತ್ತಪ್ಪ ದೇವಾಲಯಗಳಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ನಾಪೋಕ್ಲು ವ್ಯಾಪ್ತಿಯ ಮೂರು ಇಗ್ಗುತ್ತಪ್ಪ ದೇವಾಲಯಗಳಲ್ಲಿ ಒಂದಾದ ಪೇರೂರು ಗ್ರಾಮದ ಬಲ್ಲತ್ತನಾಡು ಪೆರ್ಮೆ ಇಗ್ಗುತ್ತಪ್ಪ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಮಹಾಪೂಜೆ ಜರುಗಿತು. ಭಕ್ತರು ಬೆಳಿಗ್ಗೆಯಿಂದಲೇ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆ ನಡೆಯಿತು. ಪೂಜೆಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ಮಧ್ಯಾಹ್ನ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ಏರ್ಪಡಿಸಲಾಯಿತು. ಬಳಿಕ ಇಗ್ಗುತ್ತಪ್ಪ ದೇವರ ಉತ್ಸವ ಜರುಗಿತು. ದೇವಾಲಯದ ಅರ್ಚಕ ಗಿರೀಶ್ ನೇತೃತ್ವದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಿದವು. ದೇವಾಲಯದ ಆಡಳಿತ ಮಂಡಳಿ ಸದಸ್ಯರು, ತಕ್ಕಮುಖ್ಯಸ್ಥರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.