ಕೂಡಿಗೆ, ಮಾ. ೩: ಹಾರಂಗಿ ಮೀನು ಮರಿ ಉತ್ಪಾದನಾ ಕೇಂದ್ರದ ವತಿಯಿಂದ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಎದುರು ಮತ್ತು ಕೂಡಿಗೆ ಕಾವೇರಿ ನದಿಗೆ ಒಂದೂವರೆ ಲಕ್ಷ ಸಾಮಾನ್ಯ ಗೆಂಡೆ ಮೀನು ಮರಿಗಳನ್ನು ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಬಿಟ್ಟರು.

ಈ ಸಂದರ್ಭದಲ್ಲಿ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಕೆ. ಟಿ. ದರ್ಶನ್ ಹಾರಂಗಿ ಮೀನು ಮರಿ ಉತ್ಪಾದನಾ ಕೇಂದ್ರದ ಸಹಾಯಕ ನಿರ್ದೇಶಕ ಸಚಿನ್ ಇಲಾಖೆಯ ಮೇಲ್ವಿಚಾರಕ ಮಹದೇವ, ಶ್ರೀ ರಾಮಲಿಂಗೇಶ್ವರ ದೇವಾಲಯ ಸಮಿತಿಯ ಉಪಾಧ್ಯಕ್ಷ ಮಂಜುನಾಥಸ್ವಾಮಿ ಸೇರಿದಂತೆ ದೇವಾಲಯ ಸಮಿತಿಯ ಸದಸ್ಯರು ಹಾಗೂ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.