ಕೂಡಿಗೆ, ಮಾ. ೨: ಕುಶಾಲನಗರ ತಾಲೂಕಿನ ಮೂರು ವಿದ್ಯಾರ್ಥಿಗಳು ಉಕ್ರೇನಿನಲ್ಲಿ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರ ಪೋಷಕರ ಮನೆಗೆ ಜಿಲ್ಲೆಯ ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು ಭೇಟಿ ನೀಡಿ ಮಾಹಿತಿ ಪಡೆದರು.
ಉಕ್ರೇನ್ನಲ್ಲಿರುವ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಕೂಡ್ಲೂರು ಗ್ರಾಮದ ಕೆ.ಕೆ. ಮಂಜುನಾಥ್ ಕುಮಾರ್ ಅವರ ಪುತ್ರ ಚಂದನ್ ಗೌಡ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದ ರಮೇಶ್ ಅವರ ಪುತ್ರಿ ಅಕ್ಷಿತಾ ಅಕ್ಕಮ್ಮ ಹಾಗೂ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ಬಡಾವಣೆಯ ಲಿಕಿತ್ ಕೊರಗಪ್ಪ ಅವರ ಮನೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಮಾಹಿತಿ ಪಡೆದರು.
ಈ ಸಂದರ್ಭ ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್, ಕಂದಾಯ ನಿರೀಕ್ಷಕ ಸಂತೋಷ್, ಕೂಡಿಗೆ ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್ ಹಾಜರಿದ್ದರು.