ಕೂಡಿಗೆ, ಮಾ.೩: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಸಾರ್ವಜನಿಕ ಆಟದ ಮೈದಾನಕ್ಕೆ ಗ್ರಾಮ ವಿಕಾಸ ಯೋಜನೆ ಅಡಿಯಲ್ಲಿ ೫ ಲಕ್ಷ ರೂ ವೆಚ್ಚದ ಹೊನಲು ಬೆಳಕಿನ ದೀಪ ಅಳವಡಿಕೆ ಕಾರ್ಯ ನಡೆಯುತ್ತಿದೆ.

ಹುದುಗೂರು ಗ್ರಾಮದಲ್ಲಿ ಈಗಾಗಲೇ ಸಾರ್ವಜನಿಕ ಆಟದ ಮೈದಾನದ ನಿರ್ಮಾಣ ಮತ್ತು ಸಣ್ಣ ಪ್ರಮಾಣದ ಪ್ರೇಕ್ಷಕರ ಗ್ಯಾಲರಿ ಸೇರಿದಂತೆ ಸುಸಜ್ಜಿತ ಮೈದಾನ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಹೊನಲು ಬೆಳಕಿನ ದೀಪಗಳನ್ನು ನಾಲ್ಕು ಬದಿಗಳಲ್ಲಿ ಅಳವಡಿಕೆ ಮಾಡಲಾಗುತ್ತದೆ.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂ ಕೆ ಅಯಿಷಾ ಸೇರಿದಂತೆ ಹುದುಗೂರು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಯುವಕ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.