ಸಿದ್ದಾಪುರ: ಸಿದ್ದಾಪುರದಲ್ಲಿ ಪಲ್ಸ್ ಪೋಲಿಯೋ ನಿರೋಧಕ ಲಸಿಕೆಯನ್ನು ಮಕ್ಕಳಿಗೆ ನೀಡಲಾಯಿತು. ಗುಹ್ಯ ಗ್ರಾಮದಲ್ಲಿ ಗ್ರಾ.ಪಂ. ಸದಸ್ಯ ಎಂ.ಎಸ್. ಹಸನ್ ಮಕ್ಕಳಿಗೆ ಲಸಿಕೆ ನೀಡುವ ಮೂಲಕ ಅಭಿಯಾನ ಉದ್ಘಾಟಿಸಿದರು. ಗುಹ್ಯ ಗ್ರಾಮದಲ್ಲಿ ಹೆಚ್ಚಿನ ಮಕ್ಕಳು ಪಲ್ಸ್ ಪೋಲಿಯೋ ಲಸಿಕೆ ಪಡೆದುಕೊಂಡರು.ಸೋಮವಾರಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಭಾಗದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆಯಿತು.

ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಿದ್ದವು. ಎಲ್ಲಾ ಅಂಗನವಾಡಿ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳಿಗೆ ಪೋಲಿಯೋ ಹನಿ ನೀಡಲಾಯಿತು.

ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಟರಿ ಸಂಸ್ಥೆಯ ಸಹಭಾಗಿತ್ವದಲ್ಲಿ ಲಸಿಕೆ ಅಭಿಯಾನ ನಡೆಯಿತು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು ಅವರು ಚಾಲನೆ ನೀಡಿದರು. ಈ ಸಂದರ್ಭ ರೋಟರಿ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಧರ್ಮಪ್ಪ, ಮಾಜೀ ಅಧ್ಯಕ್ಷ ಪಿ.ಕೆ. ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಚೌಡ್ಲು ಗ್ರಾ.ಪಂ. ವ್ಯಾಪ್ತಿಯ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಲಸಿಕಾ ಅಭಿಯಾನಕ್ಕೆ ಗ್ರಾ.ಪಂ. ಉಪಾಧ್ಯಕ್ಷೆ ಮಂಜುಳಾ ಸುಬ್ರಮಣಿ ಅವರು ಚಾಲನೆ ನೀಡಿದರುನಾಪೋಕ್ಲು: ನಾಪೋಕ್ಲು ಪಂಚಾಯಿತಿ ವ್ಯಾಪ್ತಿಯ ಚೆರಿಯಪರಂಬು, ಕಲ್ಲುಮೊಟ್ಟೆ, ಹಳೆತಾಲೂಕು, ಬೇತು, ಮೂಟೇರಿ, ಕೋಟೇರಿ, ತೊತ್ತಿಯಂಡ ಬಾರಿಕೆ, ಕೊಳಕೇರಿ ೧ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ೫ ವರ್ಷದ ಒಳಗಿನ ಮಕ್ಕಳಿಗೆ ಭಾನುವಾರು ಪೋಲಿಯೋ ನಿರೋಧಕ ಹನಿ ಹಾಕುವ ಕಾರ್ಯಕ್ರಮ ನಡೆಯಿತು.

ವಿವಿಧೆಡೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮೊಹಮದ್ ಖುರೇಶಿ ಸದಸ್ಯರಾದ ಅರುಣ್ ಬೇಬ, ಕಾಳೆಯಂಡ ಸಾಬ ತಿಮ್ಮಯ್ಯ, ಕನ್ನಂಬೀರ ಸುಧಿ ತಿಮ್ಮಯ್ಯ, ಅಶ್ರಫ್, ಶಿಕ್ಷಕ ಸುಕುಮಾರ್ ಹಾಗೂ ಧವಸ ಭಂಡಾರದ ನಿರ್ದೇಶಕಿ ಸಾವಿತ್ರಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಕೋವಿಡ್ ಮಾರ್ಗಸೂಚಿಯೊಂದಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ನಡೆಸಿದರು. ಪೋಷಕರು ತಮ್ಮ ಮಕ್ಕಳೊಂದಿಗೆ ಪಲ್ಸ್ ಪೋಲಿಯೋ ಕೇಂದ್ರಗಳಿಗೆ ಆಗಮಿಸಿ ಪೋಲಿಯೋ ಲಸಿಕೆ ಹಾಕಿಸಿಕೊಂಡರು.*ಗೋಣಿಕೊಪ್ಪ: ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರೀನ್ ಡಾಟ್ ಟ್ರಸ್ಟ್ ಸಹಯೋಗದೊಂದಿಗೆ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು. ೫ ವರ್ಷದ ಒಳಗಿನ ಮಗುವಿಗೆ ಕಾನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಚಿನ್ ಸೋಮಣ್ಣ ಪೋಲಿಯೋ ಲಸಿಕೆ ಅಳವಡಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ದೇವೆಂದರ್ ರಮೇಶ್, ಕಿರಿಯ ಆರೋಗ್ಯ ಸಹಾಯಕಿ ಮಂಗಳ ಹಾಗೂ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.