ಮಡಿಕೇರಿ, ಮಾ. ೫ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಅವರು ತಾ. ೮ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಮಧ್ಯಾಹ್ನ ೧೨.೩೦ ಗಂಟೆಗೆ ಹುತಾತ್ಮ ಅಲ್ತಾಪ್ ಅಹ್ಮದ್ ಅವರ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ. ನಂತರ ಮಧ್ಯಾಹ್ನ ೧.೩೦ ಗಂಟೆಗೆ ಸುದರ್ಶನ ಅತಿಥಿ ಗೃಹದಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್ ಸಮುದಾಯದ ಮುಖಂಡರೊAದಿಗೆ ಚರ್ಚೆ, ೩.೩೦ ಗಂಟೆಗೆ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ಜೊತೆ ಸಮಾಲೋಚನೆ, ನಂತರ ೪.೪೫ ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಆರ್.ನಿಸಾರ್ ಅಹ್ಮದ್ ತಿಳಿಸಿದ್ದಾರೆ.