ಮಡಿಕೇರಿ, ಮಾ. ೫: ನಗರಸಭೆ ವ್ಯಾಪ್ತಿಯಲ್ಲಿ ಹೊಸ ಕಟ್ಟಡ ನಿರ್ಮಿಸುವವರು ಕಾನೂನಿನ ರೀತಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ನಗರಸಭೆಯಿಂದ ಅನುಮತಿ ಪಡೆದು ನಕ್ಷೆ ಪ್ರಕಾರವೇ ಕಟ್ಟಡ ನಿರ್ಮಿಸಬೇಕು. ಇಲ್ಲದಿದ್ದಲ್ಲಿ ನಗರಸಭೆ ಕಾನೂನು ರೀತಿ ಕ್ರಮ ಕೈಗೊಳ್ಳಲಿದೆ ಎಂದು ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಎಚ್ಚರಿಸಿದ್ದಾರೆ.
ಕಟ್ಟಡಗಳ ನಿರ್ಮಾಣ ಸಂಬAಧಿಸಿದAತೆ ಮಾಹಿತಿ ನೀಡಿದ ಅವರು, ನಗರಸಭೆ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಕಾನೂನು ಮೀರಿ ಕಟ್ಟಡಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಈ ಹಿಂದೆ ಕೆಲವು ಅಕ್ರಮ ಕಟ್ಟಡಗಳು ತಲೆ ಎತ್ತಿದ್ದು, ಅಂತಹ ಕಟ್ಟಡಗಳ ಮಾಲೀಕರು ನೇರವಾಗಿ ಕಚೇರಿಯಲ್ಲಿ ಭೇಟಿ ಮಾಡಿ ಕಾನೂನಿನ ಅವಕಾಶವಿದ್ದರೆ ಮಾಲೀಕ ರಿಗೆ ನಗರಸಭೆಯಿಂದ ಯಾವುದೇ ರೀತಿಯ ತೊಂದರೆಯಾಗದAತೆ ಕಟ್ಟಡ ಪೂರ್ಣಗೊಳಿಸಲು ಅನುಮತಿ ನೀಡಲಿದೆ. ಆದರೆ ಯಾವುದೇ ಅನುಮತಿ ಇಲ್ಲದೆ, ನಕ್ಷೆಗೆ ವಿರುದ್ಧವಾಗಿ ಕಾನೂನು ಮೀರಿ ಕಟ್ಟಡ ನಿರ್ಮಿಸಿದ್ದಲ್ಲಿ ಅಂತಹ ಕಟ್ಟಡಗಳಿಗೆ ನಗರಸಭೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟ್ರೇಡ್ ಪರವಾನಗಿ: ನಗರದ ಒಳ ಭಾಗದಲ್ಲಿ ನಗರಸಭೆ ಸಂಬAಧಿಸಿದ ಜಾಗದಲ್ಲಿ ವ್ಯಾಪಾರ ಉದ್ಯಮ ಮಾಡುತ್ತಿರುವವರು ಸೂಕ್ತ ದಾಖಲೆಗಳನ್ನು ನಗರಸಭೆಗೆ ನೀಡಿ ಪರವಾನಗಿ ಪಡೆದು ಕೊಳ್ಳುವಂತೆ ತಿಳಿಸಿದ್ದಾರೆ.
ಇದುವರೆಗೆ ಪರವಾನಗಿ ಪಡೆಯದೆ ಇರುವ ವ್ಯಾಪಾರಸ್ಥರು ಪರವಾನಗಿ ಪಡೆಯದಿದ್ದಲ್ಲಿ ಪಡೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧ್ಯಕ್ಷರು ಎಚ್ಚರಿಸಿದ್ದಾರೆ.
ಮನೆ ಬಾಗಿಲಿಗೆ ನಗರಸಭೆ: ನಗರಸಭೆ ಅಧ್ಯಕ್ಷೆಯಾಗಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸದ್ಯದಲ್ಲೇ ನಗರಸಭಾ ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಅಧಿಕಾರಿಗಳ ಜೊತೆ ನಗರ ಸಂಚಾರ ಏರ್ಪಡಿಸಿ ವಾರ್ಡ್ಗಳ ಕುಂದುಕೊರತೆ ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಅನಿತಾ ಪೂವಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಡಿಯುವ ನೀರು
ಈಗಾಗಲೇ ಬೇಸಿಗೆ ಕಾಲ ಆರಂಭವಾಗುತ್ತಿರುವ ಹಿನ್ನೆಲೆ ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದAತೆ ಗಮನಹರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದAತೆ ಗಮನಹರಿಸುವ ನಿಟ್ಟಿನಲ್ಲಿ ಈಗಾಗಲೇ ಕುಂಡಾಮೇಸ್ತಿç ಕೂಟುಹೊಳೆ ಮತ್ತು ನಗರದ ನೀರು ಶೇಖರಣಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಬೇಸಿಗೆ ಅವಧಿಯಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಅಭಾವವನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ನಗರದ ವಿವಿಧ ವಾರ್ಡ್ಗಳಲ್ಲಿ ನೀರಿನ ಸಂಪನ್ಮೂಲವಿದ್ದು, ತಾಂತ್ರಿಕ ದೋಷವಿದ್ದ ಬೋರ್ವೆಲ್ಗಳಿಗೆ ಮೋಟಾರು ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಮೂರು ದಿನದ ಹಿಂದೆ ತಾಂತ್ರಿಕ ತೊಂದರೆಯಿAದ ನೀರು ಪೂರೈಕೆಯಲ್ಲಿ ಅಡೆತಡೆ ಉಂಟಾಗಿತ್ತು. ಆ ದಿಸೆಯಲ್ಲಿ ನಗರಕ್ಕೆ ನೀರು ಪೂರೈಸುತ್ತಿರುವ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಆ ದಿಸೆಯಲ್ಲಿ ಮಡಿಕೇರಿ ನಗರದ ಜನತೆಯು ಸಹ ಕುಡಿಯುವ ನೀರು ಪೋಲಾಗದಂತೆ ಎಚ್ಚರವಹಿಸಬೇಕು ಎಂದು ನಗರಸಭೆ ಅಧ್ಯಕ್ಷರು ಕೋರಿದ್ದಾರೆ.