ಮಡಿಕೇರಿ, ಮಾ. ೬: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ೨೦೨೧-೨೨ ನೇ ಸಾಲಿಗೆ ಕಾರ್ಮಿಕರ ಮಕ್ಕಳಿಂದ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಕಾರ್ಮಿಕರ ಮಕ್ಕಳ ಹಿತದೃಷ್ಟಿಯಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, ೩೧ ರವರೆಗೆ ಅವಧಿ ವಿಸ್ತರಿಸಲಾಗಿದೆ.
ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಬಯಸುವ ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್ಸೈಟ್: ಞಟತಿb.ಞಚಿಡಿಟಿಚಿಣಚಿಞಚಿ.gov.iಟಿನಲ್ಲಿ ಆನ್ಲೈನ್ ಅರ್ಜಿ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಭವನ, ನಂ ೪೮, ೨ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-೫೬೦೦೨೨, ದೂರವಾಣಿ ಸಂಖ್ಯೆ ೮೨೭೭೨೯೧೧೭೫, ೮೨೭೭೧೨೦೫೦೫, ೦೮೦-೨೩೪೭೫೧೮೮ ಗೆ ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ತಿಳಿಸಿದ್ದಾರೆ.