ಮಡಿಕೇರಿ, ಮಾ. ೫: ಅಕ್ರಮವಾಗಿ ಬೀಟಿ ಮರ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಮಡಿಕೇರಿಯ ಪೊಲೀಸ್ ಅರಣ್ಯ ಸಂಚಾರಿ ದಳ, ಸಿಐಡಿ ಘಟಕ ಪತ್ತೆಹಚ್ಚಿದೆ.

ಈ ಕೃತ್ಯದಲ್ಲಿ ತೊಡಗಿದ್ದ ವ್ಯಕ್ತ್ತಿಯೋರ್ವನನ್ನು ಬಂಧಿಸುವುದರೊAದಿಗೆ ಸಾಗಾಟಕ್ಕೆ ಬಳಸಿದ್ದ ಮಿನಿ ಲಾರಿ (ಕೆಎ೦೯ ಸಿ ೨೩೬೨)ಯನ್ನು ವಶಪಡಿಸಿಕೊಳ್ಳಲಾಗಿದೆ. ಶಕೀಲ್ ಒ.ಎ. ಎಂಬಾತ ಬಂಧಿತ ವ್ಯಕ್ತಿ. ಮಡಿಕೇರಿ-ಮೈಸೂರು ರಾಷ್ಟಿçÃಯ ಹೆದ್ದಾರಿಯ ಆನೆಕಾಡು ಮೀಸಲು ಅರಣ್ಯ ಸನಿಹದ ಬ್ರೆöÊಟ್ ಹೊಟೇಲ್ ಬಳಿ ಈ ಕಾರ್ಯಾಚರಣೆ ನಡೆಸಲಾಗಿದೆ. ಬೀಟಿ ಮರದ ೨೬ ನಾಟಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿ ಶಕೀಲ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಮಹಾನಿರೀಕ್ಷಕ ಕೆ.ವಿ. ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಚಂದ್ರಕಾAತ್ ಎಂ.ವಿ. ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ. ಸಿ.ಯು. ಸವಿ, ಸಿಬ್ಬಂದಿಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ್, ಸ್ವಾಮಿ ಮತ್ತು ಮಂಜುನಾಥ್ ಪಾಲ್ಗೊಂಡಿದ್ದರು.