ಮಡಿಕೇರಿ, ಮಾ. ೫ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲೂಕು ಯುವ ಒಕ್ಕೂಟ ಹಾಗೂ ವಿವಿಧ ಸಂಘ, ಸಂಸ್ಥೆಗಳು ಹಾಗೂ ಸೀಗೆತೋಡು ಇಂಡಿಯನ್ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಅರುವತ್ತೋಕ್ಲು ಸರ್ವದೈವತಾ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ತಾ. ೬ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಯುವ ಸಮಾವೇಶ, ಜಿಲ್ಲಾ ಯುವ ಸಂಘ ಪ್ರಶಸ್ತಿ ಪ್ರಧಾನ ಮತ್ತು ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ ನಡೆಯಲಿದೆ.

ವೀರಾಜಪೇಟೆ ಶಾಸಕರು ಹಾಗೂ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ. ಬೋಪಯ್ಯ ಯುವ ಸಮಾವೇಶ ಉದ್ಘಾಟಿಸಲಿದ್ದು, ಅರವತ್ತೋಕ್ಲು ಗ್ರಾ.ಪಂ. ಅಧ್ಯಕ್ಷ ಮನೆಯಪಂಡ ಸೋಮಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅತ್ಯುತ್ತಮ ಜಿಲ್ಲಾ ಯುವ ಸಂಘ ಪ್ರಶಸ್ತಿ ಪ್ರದಾನ ಮತ್ತು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಕ್ರೀಡಾ ಸಾಮಗ್ರಿಗಳನ್ನು ವಿತರಣೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಅರವತ್ತೊಕ್ಲು ಸರ್ವದೈವತಾ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಕಾಡ್ಯಮಾಡ ಆದಿತ್ಯ ಅಯ್ಯಪ್ಪ, ಅರುವತ್ತೋಕ್ಲು ಗ್ರಾ.ಪಂ. ಉಪಾಧ್ಯಕ್ಷೆ ಜಮ್ಮಡ ಸೌಮ್ಯ ಉಮೇಶ್, ಸದಸ್ಯರಾದ ಮನೆಯಪಂಡ ಪ್ರಾಣ್ ಬೋಪಣ್ಣ, ಮಹೇಶ್, ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಪೊನ್ನಿಮಾಡ ಪ್ರದೀಪ್, ಕೊಡಗು ಜಿಲ್ಲಾ ಯುವ ಒಕ್ಕೂಟದ ಸಲಹೆಗಾರ ಕಂದಾ ದೇವಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.