*ಗೋಣಿಕೊಪ್ಪ, ಮಾ. ೫: ಪೊನ್ನಂಪೇಟೆ ತಹಶೀÃಲ್ದಾರ್ ಕಚೇರಿಯ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ ಕಳೆದ ಆರು ದಿನಗಳಿಂದ ನಡೆಸುತ್ತಾ ಬಂದ ಧರಣಿ ಜಿಲ್ಲಾಧಿಕಾರಿಗಳ ಭೇಟಿಯೊಂದಿಗೆ ಅಂತ್ಯಕAಡಿದೆ.
ಪೊನ್ನAಪೇಟೆ ತಾಲೂಕಿನ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಬುಡಕಟ್ಟು ಸಮುದಾಯದ ಹಿರಿಯರು-ಕಿರಿಯರು ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡು ತಮ್ಮ ಹಕ್ಕಿಗಾಗಿ ಹೋರಾಟ ನಡೆಸಿದರು.
ಕೆ.ಬಾಡಗ ಗ್ರಾಮದಲ್ಲಿನ ಸರ್ವೆ ನಂ. ೨೯/೧ಎ ರ ೧೮ ಎಕರೆ ಸರ್ಕಾರಿ ಪೈಸಾರಿ ಜಾಗ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗ ಒತ್ತುವರಿಯಾಗಿರುವುದನ್ನು ಸರ್ವೆ ನಡೆಸಿ ಅರ್ಹ ಫಲಾನುಭವಿಗಳಿಗೆ ನೀಡುವಂತೆ ಹಾಗೂ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೈಸೊಡ್ಲೂರು ಗ್ರಾಮದ ಸರ್ವೆ ನಂ. ೧೮೧/೧ಪಿ೧ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದಲ್ಲಿ ೫ ವರ್ಷಗಳಿಂದ ಗುಡಿಸಲು ಕಟ್ಟಿಕೊಂಡು ವಾಸವಿರುವ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಕುಡಿಯುವ ನೀರು ಒದಗಿಸುವಂತೆ ಸೇರಿ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಚಾಲಕ ಪರಶುರಾಮ್ ಹಾಗೂ ಮೈಸೂರು ವಿಭಾಗ ಸಂಚಾಲಕ ಕೃಷ್ಣಪ್ಪ ಅವರ ನೇತೃತ್ವದಲ್ಲಿ ಧರಣಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧಿಕಾರಿ ಬಿ.ಸಿ. ಸತೀಶ ಅವರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಧರಣಿ ನಿರಂತರ ಬೇಡಿಕೆಗಳನ್ನು ಆಲಿಸಿ ಪೂರಕ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನಾಕಾರರು ಧರಣಿ ಮುಂದುವರೆಸುವುದನ್ನು ಹಿಂಪಡೆದರು.
ನಂತರ ಜಿಲ್ಲಾಧಿಕಾರಿಗಳು ಪ್ರತಿಭಟನಾಕಾರರನ್ನು ಉದ್ದೇಶಿಸಿ ಈಗಾಗಲೇ ಹೈಸೊಡ್ಲೂರು ಗ್ರಾಮದಲ್ಲಿ ವಾಸವಿರುವ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಕುಡಿಯುವ ನೀರು ಒದಗಿಸಲು ಕೊಳವೆ ಬಾವಿ ತೆಗೆಯಲು ಕಾಮಗಾರಿ ಪ್ರಾರಂಭಿಸಲಾಗಿದೆ. ಮತ್ತೊಂದು ಬೇಡಿಕೆಯಾದ ನಿವೇಶನ ರಹಿತರಿಗೆ ಮೀಸಲಿಟ್ಟ ಕೆ.ಬಾಡಗ ಗ್ರಾಮದಲ್ಲಿನ ಪೈಸಾರಿ ಜಾಗ ಒತ್ತುವರಿಗೊಂಡಿರುವುದನ್ನು ಕಂದಾಯ ಇಲಾಖೆಯ ಮೂಲಕ ಸರ್ವೆ ಕಾರ್ಯ ನಡೆಸಲು ಶೀಘ್ರವೇ ಕಾರ್ಯೋನ್ಮುಖವಾಗುವುದಾಗಿ ಭರವಸೆ ನೀಡಿದರು. ಕೆಲ ದಿನಗಳಲ್ಲಿಯೇ ಈ ಸರ್ವೆ ಕಾರ್ಯ ನಡೆಯಲಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು; ತಕ್ಷಣವೇ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಬಗೆಹರಿಸುವಂತೆ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಎನ್.ಎಸ್. ಪ್ರಶಾಂತ್ ಅವರಿಗೆ ಸೂಚಿಸಿದರು. ನಂತರ ಪ್ರತಿಭಟನಾಕಾರರು ನಿವೇಶನ ಹೊಂದಲು ೯೪ಸಿ ಅಡಿಯಲ್ಲಿ ಅಕ್ರಮ ಸಕ್ರಮ ಸಮಿತಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು; ಪ್ರತಿಭಟನೆಯನ್ನು ಹಿಂಪಡೆಯಬೇಕು ಎಂದು ದಲಿತ ಮುಖಂಡರ ಮನವೊಲಿಸುವ ಪ್ರಯತ್ನದಲ್ಲಿ ಸಫಲತೆ ಕಂಡುಕೊAಡರು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗುರುಶಾಂತಪ್ಪ, ತಾಲೂಕು ಡಿ.ವೈ.ಎಸ್.ಪಿ ಜಯಕುಮಾರ್, ವೃತ್ತ ನಿರೀಕ್ಷಕ ಜಯರಾಮ್ ಇದ್ದರು.
ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಚಾಲಕ ಪರಶುರಾಮ್ ಮಾತನಾಡಿ, ಜಿಲ್ಲಾಧಿಕಾರಿಗಳು ನೀಡಿದ ಭರವಸೆಗೆ ಮಣಿದು ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿದ್ದೇವೆ. ನಮ್ಮ ಪ್ರಮುಖ ಎರಡು ಬೇಡಿಕೆಗಳು ತಕ್ಷಣವೇ ಈಡೇರಬಹುದು ಎಂಬ ನಂಬಿಕೆ ಹೊಂದಿದ್ದೇವೆ. ಕಳೆದ ಎರಡು ಅವಧಿಯಲ್ಲಿಯೂ ತಾಲೂಕಿನ ದಂಡಾಧಿಕಾರಿಗಳು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಬೇಡಿಕೆಗೆ ಅನುಗುಣವಾಗಿ ಕಾರ್ಯನಿರತವಾಗದೇ ನಿರ್ಲಕ್ಷ÷್ಯ ವಹಿಸಲಾಗಿತ್ತು. ಮೂರನೇ ಅವಧಿಯಲ್ಲಿಯೂ ಈ ವ್ಯವಸ್ಥೆ ಮರುಕಳಿಸದೇ ನಮ್ಮ ಬೇಡಿಕೆ ಈಡೇರಬೇಕಾಗಿದೆ. ಜಿಲ್ಲಾಧಿಕಾರಿಗಳ ಭರವಸೆಯನ್ನು ನಂಬಿ ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿದ್ದೇವೆ. ನೀಡಿದ ಅವಧಿಯೊಳಗೆ ಬೇಡಿಕೆಗಳು ಈಡೇರದಿದ್ದರೆ ಜಿಲ್ಲಾ ಮಟ್ಟದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ತಮಟೆ ಚಳವಳಿ, ರಸ್ತೆ ತಡೆ, ತಹಶೀಲ್ದಾರ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಸೇರಿದಂತೆ ಹಲವು ರೀತಿಯಲ್ಲಿ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದರು.
ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಪಡಿಕ್ಕಲ್ ಕುಸುಮಾವತಿ, ಮೈಸೂರು ವಿಭಾಗೀಯ ಸಂಚಾಲಕ ಕೃಷ್ಣಪ್ಪ, ಜಿಲ್ಲಾ ಖಜಾಂಜಿ ಮಹದೇವ್, ತಾಲೂಕು ಸಂಚಾಲಕ ರಜನಿಕಾಂತ್, ಪದಾಧಿಕಾರಿಗಳಾದ ಕಾಟಿಮುರುಗ, ತಂಗವೇಲು, ಚೆಲುವ ಇತರರು ಹಾಜರಿದ್ದರು.
-ಎನ್.ಎನ್. ದಿನೇಶ್