ಮಡಿಕೇರಿ, ಮಾ. ೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಹಿಳಾ ಆಯೋಗ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಸ್ತಿçà ಶಕ್ತಿ ಒಕ್ಕೂಟ ಇವರ ಸಹಯೋಗದಲ್ಲಿ ತಾ. ೦೮ ರಂದು (ನಾಳೆ) ಬೆಳಗ್ಗೆ ೧೦.೩೦ ಗಂಟೆಗೆ ನಗರದ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ನಡೆಯಲಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಉದ್ಘಾಟಿಸಲಿದ್ದಾರೆ. ಶಾಸಕರಾದ ಎಂ.ಪಿ.ಅಪ್ಪಚ್ಚುರAಜನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ವೀಣಾ ಅಚ್ಚಯ್ಯ, ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ, ನಗರಸಭೆ ಅಧ್ಯಕ್ಷೆ ಎನ್.ಪಿ. ಅನಿತಾ, ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಜಿನರಾಳಕರ ಭೀಮರಾವ್ ಲಗಮಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜಿಎಂ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಮಣ್ಯ, ಜಿ.ಪಂ. ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ.ಎ. ಅಯ್ಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ. ಮುದ್ದಣ್ಣ, ಸ್ತಿçà ಶಕ್ತಿ ಒಕ್ಕೂಟದ ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಅಧ್ಯಕ್ಷರು, ರಾಜ್ಯಾಧ್ಯಕ್ಷರು ರೆಹನಾ ಸುಲ್ತಾನ್ ಇತರರು ಪಾಲ್ಗೊಳ್ಳಲಿದ್ದಾರೆ.