ಮಡಿಕೇರಿ, ಮಾ.೬: ಮದೆನಾಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಸುಮಾರು ೨.೫೦ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಜಿ. ಬೋಪಯ್ಯ ಅವರು ಶನಿವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕರು ಸರ್ಕಾರ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡಿದೆ. ಆ ನಿಟ್ಟಿನಲ್ಲಿ ಕೃಷಿಕರು, ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.
ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಸೇತುವೆ, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಹೀಗೆ ಹತ್ತು ಹಲವು ಮೂಲ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ. ಗ್ರಾಮೀಣ ಪ್ರದೇಶ ಅಭಿವೃದ್ಧಿ ಆದಲ್ಲಿ ರಾಷ್ಟçದ ಅಭಿವೃದ್ಧಿ ಎಂಬುದನ್ನು ಮರೆಯುವಂತಿಲ್ಲ ಎಂದರು.
ಕಾಮಗಾರಿಗಳ ವಿವರ ಇಂತಿದೆ: ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂದಾಜು ೨ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟಿಸಲಾಯಿತು.
ಬಳಿಕ ಮದೆನಾಡು ವ್ಯಾಪ್ತಿಯಲ್ಲಿ ೯ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಾಲೋನಿಗೆ ಸೇರಿದ ರಸ್ತೆಯ ಭೂಮಿ ಪೂಜೆ ಹಾಗೂ ೩೦ ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಮದೆ ಸಾಲಪು ಗ್ರಾಮದ ರಸ್ತೆ ಮತ್ತು ಸೇತುವೆ ಉದ್ಘಾಟಿಸಿದರು.
೩ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿ ರುವ ಪಟ್ಟಡ ಕುಟುಂಬಕ್ಕೆ ಸೇರಿದ ರಸ್ತೆ ಮತ್ತು ಮದೆಮಾದೂರಪ್ಪ ದೇವಸ್ಥಾನ ರಸ್ತೆಯ ೪ ಲಕ್ಷ ವೆಚ್ಚದ ಕಾಮಗಾರಿಯ ಉದ್ಘಾಟನೆ.
ರೂ.೫ ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಹುಲಿಮನೆ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆಯನ್ನು ಶಾಸಕರು ಉದ್ಘಾಟಿಸಿದರು.
ಮದೆನಾಡು ಪಂಚಾಯಿತಿಗೆ ಸಂಬAಧಿಸಿದAತೆ ಅಂದಾಜು ೨.೫೦ ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮತ್ತು ಭೂಮಿ ಪೂಜೆಯನ್ನು ನೆರವೇರಿಸಿದರು.
ಮಡಿಕೇರಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬೆಪ್ಪುರನ ಮೇದಪ್ಪ, ಮದೆನಾಡು ಪಂಚಾಯಿತಿಯ ಅಧ್ಯಕೆÀ್ಷ ಚೆರಿಯಮನೆ ಚಂದ್ರಾವತಿ, ಉಪಾಧ್ಯಕ್ಷೆ ಪಿ.ಎ. ಚಂದ್ರಾವತಿ, ಪ್ರಮುಖರಾದ ಧನಂಜಯ, ಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಜಗದೀಶ್, ಶಕ್ತಿ ಕೇಂದ್ರದ ಪ್ರಮುಖರಾದ ಬೆಳ್ಯನ ರವಿ, ಕಾರ್ಯಕರ್ತರಾದ ತನು, ಸುರೇಶ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ನಂಜುAಡಸ್ವಾಮಿ ಇದ್ದರು.