ಮಡಿಕೇರಿ, ಮಾ. ೬: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯಿತಿ ಬ್ಯಾಡಗೊಟ್ಟ ಇವರು ಸೋಮವಾರಪೇಟೆ ತಾಲ್ಲೂಕು, ತಳಗೂರು ಗ್ರಾಮ ಪೈಸಾರಿ ಸ.ನಂ ೪/೨ ರ ೦.೭೦ ಸೆಂಟ್ ಜಾಗದಲ್ಲಿ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವತಿಯಿಂದ ವೈಜ್ಞಾನಿಕ ಕಸ ವಿಲೇವಾರಿ ಘಟಕ ಸ್ಥಾಪಿಸಲು ಉದ್ದೇಶಿಸಿರುವ ಜಾಗದಲ್ಲಿ ಅಡಚಣೆಯಾದ ೧೧೩ ಅಕೇಶಿಯಾ ಮತ್ತು ೬ ಸುರ್ಗಿ ಮರಗಳನ್ನು ಅರಣ್ಯ ಇಲಾಖಾ ವತಿಯಿಂದ ತೆರವುಗೊಳಿಸಲು ಕೋರಿದ್ದಾರೆ.
ಸಾರ್ವಜನಿಕರು ಈ ಬಗ್ಗೆ ಯಾವುದೇ ಆಕ್ಷೇಪಣೆ ಇದ್ದಲ್ಲಿ ಲಿಖಿತವಾಗಿ ತಾ. ೭ ರೊಳಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಡಿಕೇರಿ ಇವರಿಗೆ ಆಕ್ಷೇಪಣೆಯನ್ನು ಸಲ್ಲಿಸಬಹುದು. ನಿಗದಿತ ಅವಧಿಯಲ್ಲಿ ಯಾವುದೇ ಆಕ್ಷೇಪಣೆ ಬಾರದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.