ಕುಶಾಲನಗರ, ಮಾ. ೭: ಕುಶಾಲನಗರ ಇನ್ನರ್ ವೀಲ್ ಕ್ಲಬ್ ಗೆ ಜಿಲ್ಲಾ ಅಧ್ಯಕ್ಷ ಪುಷ್ಪ ಗುರುರಾಜ್ ಅಧಿಕೃತ ಭೇಟಿ ನೀಡಿ ಕಾರ್ಯಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಕುಶಾಲನಗರದಲ್ಲಿ ಕ್ಲಬ್ ಅಧ್ಯಕ್ಷ ರೂಪ ಉಮಾಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಚೇರ್ಮನ್ ಪುಷ್ಪ ಗುರುರಾಜ್, ಸ್ಥಳೀಯ ಚಟುವಟಿಕೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಪ್ರತಿಯೊಬ್ಬರೂ ಸೇವಾ ಮನೋಭಾವನೆ ಮೂಲಕ ಕುಶಾಲನಗರ, ಮಾ. ೭: ಕುಶಾಲನಗರ ಇನ್ನರ್ ವೀಲ್ ಕ್ಲಬ್ ಗೆ ಜಿಲ್ಲಾ ಅಧ್ಯಕ್ಷ ಪುಷ್ಪ ಗುರುರಾಜ್ ಅಧಿಕೃತ ಭೇಟಿ ನೀಡಿ ಕಾರ್ಯಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಕುಶಾಲನಗರದಲ್ಲಿ ಕ್ಲಬ್ ಅಧ್ಯಕ್ಷ ರೂಪ ಉಮಾಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಚೇರ್ಮನ್ ಪುಷ್ಪ ಗುರುರಾಜ್, ಸ್ಥಳೀಯ ಚಟುವಟಿಕೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಪ್ರತಿಯೊಬ್ಬರೂ ಸೇವಾ ಮನೋಭಾವನೆ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಇದೇ ಸಂದರ್ಭ ಕ್ಲಬ್ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಪ್ರಶಂಸನಾ ಪತ್ರ ವಿತರಿಸಲಾಯಿತು.

ಕ್ಲಬ್‌ನ ಅರ್ಧವಾರ್ಷಿಕ ಕಾರ್ಯಕ್ರಮಗಳ ಕೈಪಿಡಿ ಬಿಡುಗಡೆಗೊಳಿಸಲಾಯಿತು. ಕ್ಲಬ್ ಉಪಾಧ್ಯಕ್ಷೆ ಚಿತ್ರ ರಮೇಶ್, ಕಾರ್ಯದರ್ಶಿ ಭಾರತಿ ದೇವಯ್ಯ, ಖಜಾಂಚಿ ತೇಜಸ್ವಿ ಗೌತಮ್, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಸದಸ್ಯರು ಇದ್ದರು.