ಶನಿವಾರಸಂತೆ, ಮಾ. ೭: ಜಿಲ್ಲೆಯ ದಲಿತರ ನಿಗಮಕ್ಕೆ ಗಂಗಾ ಕಲ್ಯಾಣ ಯೋಜನೆ, ಸ್ವಂತ ಉದ್ಯೋಗ ಯೋಜನೆ ಇತ್ಯಾದಿ ಯೋಜನೆಗಳಿಗೆ ಸಲ್ಲಿಸಿರುವ ಫಲಾನುಭವಿಗಳಿಗೆ ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡುವಂತೆ ಶನಿವಾರಸಂತೆ ಹೋಬಳಿ ದ.ಸಂ.ಸ. ಪದಾಧಿಕಾರಿಗಳು ಬೆಂಗಳೂರಿಗೆ ನಿಯೋಗ ತೆರಳಿ ಮನವಿ ಪತ್ರ ಸಲ್ಲಿಸಿದರು.

ದ.ಸಂ.ಸ. ಜಿಲ್ಲಾ ಸಂಯೋಜಕ ಜೆ.ಆರ್. ಪಾಲಾಕ್ಷ, ಪ್ರಧಾನ ಕಾರ್ಯದರ್ಶಿ ವೀರೇಂದ್ರ, ಪದಾಧಿಕಾರಿಗಳಾದ ಎಸ್.ಜೆ. ರಾಜಪ್ಪ, ಕಾಂತರಾಜ್, ರಾಜು ಅವರು ಬೆಂಗಳೂರಿಗೆ ನಿಯೋಗ ತೆರಳಿ ದ.ಸಂ.ಸ. ರಾಜ್ಯ ಸಂಯೋಜಕ ವಿ.ನಾಗರಾಜ್ ಅವರೊಂದಿಗೆ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಸಿ. ನಾಗೇಶ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸುರೇಶ್‌ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.

ನಂತರ ನಿಯೋಗ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಭೇಟಿಯಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಶೀಘ್ರ ಖರ್ಚು ಮಾಡುವಂತೆ, ವಿವಿಧ ಹಂತದ ಎಲ್ಲಾ ವಿದ್ಯಾರ್ಥಿಗಳ ವಿವಿಧ ಶ್ರೇಣಿಯ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಹಾಗೂ ದಲಿತ ವಿದ್ಯಾರ್ಥಿಗಳ ವಾರ್ಷಿಕ ಆದಾಯದ ಮಿತಿಯನ್ನು ರೂ. ೨.೫ಲಕ್ಷದಿಂದ ರೂ. ೧೦ ಲಕ್ಷಕ್ಕೆ ಏರಿಕೆ ಮಾಡಬೇಕು. ಶನಿವಾರಸಂತೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹಣ ಮಂಜೂರಾತಿಯಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸುವAತೆಯೂ ಹಾಗೂ ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಿತು.