ಮಡಿಕೇರಿ, ಮಾ. ೮: ಸರ್ಕಾರ ಮಹಿಳೆಯರ ಶ್ರೇಯೋಭಿವೃದ್ಧಿಗೆ ಮಾತೃಪೂರ್ಣ, ಮಾತೃವಂದನಾ, ಭಾಗ್ಯಲಕ್ಷಿö್ಮÃ, ಸ್ತಿçà ಶಕ್ತಿ ಗುಂಪುಗಳಿಗೆ ಸಹಾಯಧನ, ಕಿಶೋರಿ ಯೋಜನೆ ಹೀಗೆ ಹತ್ತು ಹಲವು ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಬಳಸಿಕೊಂಡು ಮಹಿಳೆಯರು ಸ್ವಾವಲಂಬಿ ಬದುಕು ನಡೆಸುವಂತಾಗಬೇಕು ಎಂದು ನಗರಸಭೆ ಅಧ್ಯಕೆÀ್ಷ ನೆರವಂಡ ಅನಿತಾ ಪೂವಯ್ಯ ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಹಿಳಾ ಆಯೋಗ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಸ್ತಿçà ಶಕ್ತಿ ಒಕ್ಕೂಟ, ಜಿ.ಪಂ.ಸAಜೀವಿನಿ ವಿಭಾಗ ಇವರ ಸಹಯೋಗದಲ್ಲಿ ನಗರದ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆದ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳೆಯರಿಗೆ ಸಮಾಜದಲ್ಲಿ ಹಿಂದೆಗಿAತ ಇಂದು ಸಮಾನ ಅವಕಾಶಗಳು ಹೆಚ್ಚು ದೊರೆಯುತ್ತಿದೆ. ಮಹಿಳೆಯರು ರಾಜಕೀಯ, ಕ್ರೀಡೆ, ಸಾಹಿತ್ಯ, ಆಡಳಿತ, ವಿಜ್ಞಾನ, ತಂತ್ರಜ್ಞಾನ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಸಹ ಮುಂಚೂಣಿಯಲ್ಲಿದ್ದಾರೆ. ಆ ದಿಸೆಯಲ್ಲಿ ಮಹಿಳೆಯರು ಆತ್ಮವಿಶ್ವಾಸ ಹಾಗೂ ಮನೋಸ್ಥೆöÊರ್ಯ ಹೆಚ್ಚಿಸಿ ಕೊಂಡು ಸಮಾನ ಅವಕಾಶಗಳನ್ನು ಪಡೆಯಲು ಮುಂದಾಗಬೇಕು ಎಂದು ಹೇಳಿದರು.
ಹಿಂದೆ ಮಹಿಳೆಯರು ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ಮಾಡುವುದು ಅನಿವಾರ್ಯವಾಗಿತ್ತು, ಆದರೆ ಇತ್ತೀಚಿನ ದಶಕಗಳಲ್ಲಿ ಸಮಾನ ಹಕ್ಕು, ಆಸ್ತಿ ಹಕ್ಕು ಹೀಗೆ ಎಲ್ಲಾ ಕ್ಷೇತ್ರದಲ್ಲೂ ಸಮಾನ ಅವಕಾಶ ದೊರೆಯುತ್ತಿದೆ.
ಸಮಾಜ ಎಷ್ಟೇ ಬದಲಾದರೂ ಸಹ ಇನ್ನೂ ಹಲವು ಕ್ಷೇತ್ರದಲ್ಲಿ ತಾರತಮ್ಯ, ಶೋಷಣೆ, ಇರುವುದನ್ನು ಆಗಾಗ ಕಾಣುತ್ತೇವೆ. ಇದನ್ನು ಹೋಗಲಾಡಿಸಿ, ಸಮಾಜದಲ್ಲಿ ಮಾದರಿಯಾಗಿ ಬದುಕು ನಡೆಸಲು ಪ್ರಯತ್ನಿಸಬೇಕು. ಯಾವುದೇ ಕಾರಣಕ್ಕೂ ದೃತಿಗೆಡಬಾರದು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ ಪ್ರತಿಯೊಬ್ಬರ ಬದುಕಿನಲ್ಲಿ ಮಹಿಳೆಯರ ಪಾತ್ರ ಅತಿ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ನಮ್ಮ ಅಜ್ಜಿಯೂ
(ಮೊದಲ ಪುಟದಿಂದ) ಸಹ ತಂದೆಯನ್ನು ಶಿಕ್ಷಕರನ್ನಾಗಿ ಮಾಡಿದ ಪರಿಣಾಮ, ಅಜ್ಜಿಯ ಮೊಮ್ಮಗ ನಾಗರಿಕ ಸೇವೆಯಲ್ಲಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಿದೆ ಎಂದು ಸ್ಮರಿಸಿದರು.
ಸಮಾಜದ ಅಭಿವೃದ್ಧಿಗೆ ಮಹಿಳೆಯರ ಪಾತ್ರ ಪ್ರಮುಖವಾಗಿದ್ದು, ಆ ನಿಟ್ಟಿನಲ್ಲಿ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಅಭಿವೃದ್ಧಿಯತ್ತ ಹೆಜ್ಜೆ ಇಡಬೇಕು ಎಂದು ಸಲಹೆ ಮಾಡಿದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ ಇತರ ಕಡೆಗಳಿಗಿಂತ ಕೊಡಗು ಜಿಲ್ಲೆಯಲ್ಲಿ ಸ್ತಿçÃಯರು ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ; ಸಮಾಜ ಹಾಗೂ ಕುಟುಂಬದಲ್ಲಿ ಸಮಾನ ಅವಕಾಶಗಳು ಇರಬೇಕು. ಹಾಗಾದಾಗ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ. ಗ್ರಾ.ಪಂ.ಗಳಲ್ಲಿ ಮಹಿಳಾ ಸ್ನೇಹಿ ಗ್ರಾಮ ಸಭೆಗಳನ್ನು ನಡೆಸಲಾಗುತ್ತಿದ್ದು, ತಮ್ಮ ಗ್ರಾ.ಪಂ.ವ್ಯಾಪ್ತಿಯಲ್ಲಿ ಮಹಿಳೆಯರ ಅಭಿವೃದ್ಧಿಗೆ ಸಂಬAಧಿಸಿದAತೆ ಸಲಹೆ ಮಾರ್ಗದರ್ಶನ ಮಾಡಬಹುದಾಗಿದೆ. ಎನ್ಆರ್ಎಲ್ಎಂ ಕಾರ್ಯಕ್ರಮದ ಮೂಲಕ ಮಹಿಳಾ ಸಬಲೀಕರಣಕ್ಕೆ ವೃತ್ತಿ ಕೌಶಲ್ಯ ಕಾರ್ಯಕ್ರಮ ಹಮ್ಮಿಕೊಂಡು ಆರ್ಥಿಕ ಬೆಳವಣಿಗೆಗೆ ಸಹಕಾರ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಸುಬ್ರಮಣ್ಯ ಮಾತನಾಡಿ ‘ಸ್ತಿçÃ’ ಎಂದರೆ ಶಕ್ತಿ. ಪುರುಷರಷ್ಟೆ ಮಹಿಳೆಯರು ಸಮರ್ಥವಾಗಿ ಎಲ್ಲಾ ಕೆಲಸವನ್ನು ನಿಭಾಯಿಸುತ್ತಾರೆ. ಸ್ತಿçÃಯರಿಗೆ ಸಮಾನ ಅವಕಾಶಗಳು ಇನ್ನೂ ದಕ್ಕಬೇಕು; ಸ್ತಿçÃಯರ ಮೇಲೆ ನಡೆಯುವ ದೌರ್ಜನ್ಯಗಳು ನಿಲ್ಲಬೇಕು. ಸತಿ ಸಹಗಮನ ಪದ್ಧತಿ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳು ನಿರ್ಮೂಲನೆ ಆಗಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ದೊರೆಯ ಬೇಕು. ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಜಿ.ಪಂ.ಉಪ ಕಾರ್ಯದರ್ಶಿ ಲಕ್ಷಿö್ಮ ಮಾತನಾಡಿ, ಮಹಿಳೆಯರು ಹಿಂಜರಿಕೆ ಬಿಟ್ಟು ಛಲದಿಂದ ಬದುಕು ನಡೆಸಬೇಕು. ಇದರಿಂದ ಸಮಾಜದಲ್ಲಿ ಸಮಾನ ಅವಕಾಶಗಳು ದೊರೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಜಿ.ಪಂ.ಮುಖ್ಯ ಯೋಜನಾ ಧಿಕಾರಿ ಶ್ರೀಕಂಠ ಮೂರ್ತಿ ಮಾತನಾಡಿ ಮಹಿಳೆಯರಲ್ಲಿ ಸಹನೆ, ತಾಳ್ಮೆ ಹೆಚ್ಚಾಗಿರುತ್ತದೆ. ಹೆಣ್ಣು ಸಂಸಾರದ ಕಣ್ಣು ಎಂಬುದನ್ನು ಮರೆಯುವಂತಿಲ್ಲ; ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಪ್ರಯುಕ್ತ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಏರ್ಪಡಿಸ ಲಾಗಿರುವ ಸ್ತಿçÃಶಕ್ತಿ ಹಾಗೂ ಸಂಜೀವಿನಿ ಗುಂಪುಗಳು ಉತ್ಪಾದಿಸಿರುವ ಉತ್ಪನ್ನಗಳ ಮಾರಾಟ ಮೇಳ ಹಾಗೂ ಪ್ರದರ್ಶನವು ತಾ. ೧೦ರವರೆಗೆ ನಡೆಯಲಿದೆ ಎಂದು ತಿಳಿಸಿದರು.
ಸ್ತಿçÃಶಕ್ತಿ ಒಕ್ಕೂಟದ ಅಧ್ಯಕೆÀ್ಷ ರೆಹನಾ ಸುಲ್ತಾನ್ ಮಾತನಾಡಿ ಸ್ತಿçÃಶಕ್ತಿ ಗುಂಪುಗಳು ನಿಸ್ವಾರ್ಥ ಸೇವೆಯಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸಬಲರಾಗುತ್ತಿರು ವುದನ್ನು ಕಾಣುತ್ತಿದ್ದೇವೆ. ಸಮಾಜದಲ್ಲಿ ಮಹಿಳೆಯರ ಜವಾಬ್ದಾರಿ ಹೆಚ್ಚಿನ ದ್ದಾಗಿದೆ. ಆ ನಿಟ್ಟಿನಲ್ಲಿ ಸಮಾಜದ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕಿದೆ ಎಂದರು.
ಸಿಡಿಪಿಒ ಅರುಂಧತಿ ಪ್ರಾಸ್ತಾವಿಕವಾಗಿ ಮಾತನಾಡಿ ಮಹಿಳೆಯರು ಒತ್ತಡದ ಬದುಕಿನಿಂದ ಹೊಸ ಸವಾಲುಗಳನ್ನು ಎದುರಿಸಿ ಮುನ್ನಡೆಸುತ್ತಿದ್ದಾರೆ ಎಂದರು.
ಅಂಗನವಾಡಿಗಳಲ್ಲಿ ಅತ್ಯುತ್ತ ಮವಾಗಿ ಕಾರ್ಯನಿರ್ವಹಿಸಿದ್ದ ಕಾರ್ಯಕರ್ತರಾದ ನಳಿನಾಕ್ಷಿ, ಸಾವಿತ್ರಿ, ಸುಮಿತ್ರ, ಹಾಗೆಯೇ ಸ್ತಿçÃಶಕ್ತಿ ಒಕ್ಕೂಟದ ರೆಹನಾ ಸುಲ್ತಾನ, ಸುಮತಿ, ರಜನಿ, ಪುಷ್ಪಾವತಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಉಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಸಿಡಿಪಿಒ ಅಣ್ಣಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಅಧಿಕಾರಿ ಪೂಣಚ್ಚ, ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಜಿ.ಪಂ. ಸಹಾಯಕ ನಿರ್ದೇಶಕ ಜೀವನ್ ಕುಮಾರ್, ಇತರರು ಇದ್ದರು.
ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಸೀತಾಲಕ್ಷಿö್ಮ ಸ್ವಾಗತಿಸಿದರು. ಸವಿತಾ ನಿರೂಪಿಸಿದರು. ಚಂದ್ರಿಕಾ, ತೇಜಸ್ವಿನಿ, ಶೀಲ ಪ್ರಾರ್ಥಿಸಿದರು. ಹಿರಿಯ ಮೇಲ್ವಿಚಾರಕಿ ಶೀಲ ವಂದಿಸಿದರು.