ಸೋಮವಾರಪೇಟೆ,ಮಾ.೭: ಹಿಂದೂ ಸಮಾಜದ ಜಾಗೃತಿಗಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ-ದುರ್ಗಾವಾಹಿನಿಯ ಆಶ್ರಯದಲ್ಲಿ ಆಯೋಜಿಸಿದ್ದ ಹಿಂದೂ ಜನ ಜಾಗೃತಿ ಸಮಾವೇಶದಲ್ಲಿ ಸಾವಿರಾರು ಮಂದಿ ಭಾಗಿಯಾಗುವ ಮೂಲಕ ಪಟ್ಟಣ ಕೇಸರಿಮಯವಾಗಿತ್ತು.
ಕೇಸರಿ ಧ್ವಜ ಹಿಡಿದು; ಕೇಸರಿ ಶಾಲುಗಳನ್ನು ತೊಟ್ಟ ಸಾವಿರಾರು ಮಂದಿ ಪಟ್ಟಣದಲ್ಲಿ ನಡೆದ ಬೃಹತ್ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದರು. ಇಲ್ಲಿನ ವಿವೇಕಾನಂದ ವೃತ್ತದಿಂದ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ನಡೆದ ಮೆರವಣಿಗೆಯಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಮುಖಂಡರುಗಳು ಪಾಲ್ಗೊಂಡರು. ಮಹಿಳೆಯರು ಹಾಗೂ ಯುವಕ-ಯುವತಿಯರು ಸಂಭ್ರಮದಿAದ ಹೆಜ್ಜೆಹಾಕಿದರು.
ಶೋಭಾಯಾತ್ರೆಯಲ್ಲಿ ಭಾರತ್ ಮಾತಾಕೀ ಜೈ, ವಂದೇ ಮಾತರಂ, ಜೈ ಶಿವಾಜಿ, ಜೈ ಶ್ರೀರಾಮ್ ಸೇರಿದಂತೆ ಇನ್ನಿತರ ಘೋಷಣೆಗಳು ಮುಗಿಲು ಮುಟ್ಟಿದ್ದವು. ವೀರಾಂಜನೇಯ ಭಾವಚಿತ್ರವನ್ನು ಅಳವಡಿಸಿದ್ದ ವಾಹನ ಮುಂದೆ ಸಾಗುತ್ತಿದ್ದಂತೆ, ‘ನಾವೆಲ್ಲಾ ಹಿಂದು-ನಾವೆಲ್ಲಾ ಒಂದು’ ಎಂಬ ಘೋಷಣೆಯೊಂದಿಗೆ ಶೋಭಾಯಾತ್ರೆಯು ಆರಂಭವಾಯಿತು. ಪಟ್ಟಣದ ಮಡಿಕೇರಿ ರಸ್ತೆ, ಸಿ.ಕೆ. ಸುಬ್ಬಯ್ಯ ರಸ್ತೆ, ಬಸ್ ನಿಲ್ದಾಣ, ತ್ಯಾಗರಾಜ ರಸ್ತೆ, ಮುಖ್ಯರಸ್ತೆ ಮೂಲಕ ಸಾಗಿ, ಜೇಸೀ ವೇದಿಕೆಯಲ್ಲಿ ಮೆರವಣಿಗೆ ಸಮಾಪನಗೊಂಡಿತು.
ಶೋಭಾಯಾತ್ರೆಯ ಅಂಗವಾಗಿ ಪಟ್ಟಣವನ್ನು ಕೇಸರಿ ಧ್ವಜ, ಬಂಟಿAಗ್ಸ್ಗಳಿAದ ಅಲಂಕರಿಸಲಾಗಿತ್ತು. ಕಾರ್ಯಕ್ರಮ ನಡೆದ ಜೇಸೀ ವೇದಿಕೆಯು ಸಂಪೂರ್ಣ ಕೇಸರಿಮಯವಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಇಂದು ಬೆಳಿಗ್ಗೆ ಜನಜಾಗೃತಿ ಸಮಾವೇಶಕ್ಕೆ ಆಗಮಿಸುತ್ತಿದ್ದ ಮಂದಿಯನ್ನು ಪೊಲೀಸರು ಚೆಕ್ಪೋಸ್ಟ್ಗಳಲ್ಲಿ ತಡೆದು, ಅವರ ಸಂಪೂರ್ಣ ಮಾಹಿತಿಯನ್ನು ಪಡೆದರು.
ಪಟ್ಟಣಕ್ಕೆ ಪ್ರವೇಶ ಕಲ್ಪಿಸುವ ಜೂನಿಯರ್ ಕಾಲೇಜು ಜಂಕ್ಷನ್, ಅಂಬೇಡ್ಕರ್ ಸರ್ಕಲ್, ಕೋವರ್ಕೊಲ್ಲಿ ಜಂಕ್ಷನ್ಗಳಲ್ಲಿ ಪೊಲೀಸರು ಜಮಾವಣೆಗೊಂಡು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮಂದಿಯ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಕೆಲವರ ಭಾವಚಿತ್ರಗಳನ್ನು ಸಂಗ್ರಹಿಸಿದರು.
ಇಲ್ಲಿನ ವಿವೇಕಾನಂದ ವೃತ್ತದ ಬಳಿ ಕಾರ್ಯಕರ್ತರು ಜಮಾವಣೆಗೊಳ್ಳುತ್ತಿದ್ದಂತೆ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸಂತೆ ದಿನವಾದ ಹಿನ್ನೆಲೆ ಪಟ್ಟಣದಿಂದ ಹೊರಭಾಗಕ್ಕೆ ಸಂಚರಿಸುತ್ತಿದ್ದ ಹಾಗೂ ಪಟ್ಟಣಕ್ಕೆ ಆಗಮಿಸುತ್ತಿದ್ದ ಸರ್ಕಾರಿ ಹಾಗೂ ಖಾಸಗಿ ಬಸ್ಗಳು, ಖಾಸಗಿ ವಾಹನಗಳು ರಸ್ತೆಯಲ್ಲೇ ನಿಲುಗಡೆಗೊಂಡಿದ್ದರಿAದ ಸಮಸ್ಯೆ ಸೃಷ್ಟಿಯಾಯಿತು.
ಈ ಸಂದರ್ಭ ಡಿವೈಎಸ್ಪಿ ಶೈಲೇಂದ್ರ ಸೇರಿದಂತೆ ಪೊಲೀಸ್ ಇನ್ಸ್ಪೆಕ್ಟರ್ಗಳು, ಸಿಬ್ಬಂದಿಗಳು ಟ್ರಾಫಿಕ್ ವ್ಯವಸ್ಥೆಯನ್ನು ಸುಗಮಗೊಳಿಸಲು ಹರಸಾಹಸಪಟ್ಟರು. ಪೊಲೀಸ್ ಸಿಬ್ಬಂದಿಗಳೊAದಿಗೆ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರೂ ಸಹ ವಾಹನಗಳ ಸುಗಮ ಸಂಚಾರಕ್ಕೆ ಕೈಜೋಡಿಸಿದರು. ವಿವೇಕಾನಂದ ಪ್ರತಿಮೆಗೆ ಶಾಸಕ ರಂಜನ್ ಸೇರಿದಂತೆ ವಿಶ್ವಹಿಂದೂ ಪರಿಷತ್ನ ಪ್ರಮುಖರು, ಸ್ವಾಮೀಜಿಗಳು ಮಾಲಾರ್ಪಣೆ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು. ವೀರಾಂಜನೇಯ ಭಾವಚಿತ್ರವನ್ನು ಅಳವಡಿಸಿದ್ದ ವಾಹನ ಮುಂದೆ ಸಾಗುತ್ತಿದ್ದಂತೆ ಸಾವಿರಾರು ಮಂದಿ ಮೆರವಣಿಗೆಗೆ ಜೊತೆಯಾದರು. ದಿಕ್ಸೂಚಿ ಭಾಷಣಕಾರರಾಗಿದ್ದ ದುರ್ಗಾವಾಹಿನಿಯ ಪ್ರಮುಖರಾದ ಚೈತ್ರ ಕುಂದಾಪುರ, ಮಠಾಧೀಶರಾದ ರುದ್ರಮುನಿ ಸ್ವಾಮೀಜಿ, ವಿಶ್ವ ಹಿಂದೂ ಪರಿಷತ್ ಜಿಲ್ಲಾ
(ಮೊದಲ ಪುಟದಿಂದ) ಸಂಚಾಲಕ ಕೃಷ್ಣಮೂರ್ತಿ, ತಾಲೂಕು ಸಂಚಾಲಕ ಹುಲ್ಲೂರಿಕೊಪ್ಪ ಚಂದ್ರು ಅವರುಗಳು ತೆರೆದ ವಾಹನದಲ್ಲಿದ್ದರು.
ಶೋಭಾಯಾತ್ರೆ ನಡೆದ ಸಂದರ್ಭ ಪೊಲೀಸ್ ಕಣ್ಗಾವಲು ಹೆಚ್ಚಾಗಿತ್ತು. ನೂರಾರು ಮಂದಿ ಪೊಲೀಸರು ಮೆರವಣಿಗೆಯೊಂದಿಗೆ ಸಾಗಿದರು. ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಪೊಲೀಸರನ್ನು ನಿಯೋಜಿಸಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಅವರು ಖುದ್ದು ಉಪಸ್ಥಿತರಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದರಲ್ಲದೆ, ಅಧಿಕಾರಿಗಳಿಗೆ ಸೂಚನೆಗಳನ್ನು ನೀಡುತ್ತಿದ್ದರು.
ಜೇಸೀ ವೇದಿಕೆಗೆ ಶೋಭಾಯಾತ್ರೆ ಆಗಮಿಸುತ್ತಿದ್ದಂತೆ ಖಾಸಗಿ ಬಸ್ ನಿಲ್ದಾಣದಲ್ಲಿ ಸಿಡಿಮದ್ದುಗಳನ್ನು ಸಿಡಿಸಲಾಯಿತು. ಅತಿಥಿಗಳ ಭಾಷಣದ ನಡುವೆ ಆಗಾಗ್ಗೆ ಕಾರ್ಯಕರ್ತರು ‘ಭಾರತ್ ಮಾತಾ ಕೀ ಜೈ’ ಘೋಷಣೆಗಳನ್ನು ಮೊಳಗಿಸುತ್ತಿದ್ದರು.
ಚೈತ್ರಾ ಕುಂದಾಪುರ ಅವರು ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕೆಂದು ಸಂಘಟನೆಯೊAದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯ ಮಾಡಿದ್ದರ ನಡುವೆಯೂ ದುರ್ಗಾವಾಹಿನಿಯ ಪ್ರಮುಖರಾದ ಚೈತ್ರಾ ಕುಂದಾಪುರ ಅವರು ಕಾರ್ಯಕ್ರಮದಲ್ಲಿ ಭಾಗಿಯಾದರು.
ಪಟ್ಟಣದ ಪ್ರವಾಸಿ ಮಂದಿರಕ್ಕೆ ಬೆಳಗ್ಗೆ ೧೦ ಗಂಟೆ ಸುಮಾರಿಗೆ ಆಗಮಿಸಿದ ಚೈತ್ರಾ ಅವರನ್ನು ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ದುರ್ಗಾವಾಹಿನಿಯ ಜಿಲ್ಲಾ ಸಂಯೋಜಕಿ ಅಂಬಿಕಾ ಉತ್ತಪ್ಪ, ಮಾತೃ ಮಂಡಲಿ ಸಂಚಾಲಕಿ ಪವಿತ್ರ ಶೇಷಾದ್ರಿ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಹೆಚ್.ಕೆ. ಚಂದ್ರು, ಜಿ.ಪಂ. ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಪ.ಪಂ. ಮಾಜಿ ಅಧ್ಯಕ್ಷೆ ಸುಮಾ ಸುದೀಪ್, ಚೌಡ್ಲು ಗ್ರಾ.ಪಂ. ಉಪಾಧ್ಯಕ್ಷೆ ಮಂಜುಳಾ ಸುಬ್ರಮಣಿ, ದುರ್ಗಾವಾಹಿನಿಯ ಅಶ್ವಿನಿ ಕೃಷ್ಣಕಾಂತ್, ಇಂದಿರಾ ಮೋಣಪ್ಪ ಸೇರಿದಂತೆ ಇತರರು ಸ್ವಾಗತಿಸಿದರು.
ರಾಜ್ಯ ಪಶ್ಚಿಮಘಟ್ಟಗಳ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಬಿಜೆಪಿ ದಕ್ಷಿಣ ಕನ್ನಡ ಉಸ್ತುವಾರಿ ಭಾರತೀಶ್, ಮಾಜಿ ಎಂ.ಎಲ್.ಸಿ. ಎಸ್.ಜಿ. ಮೇದಪ್ಪ, ಜಿ.ಪಂ. ಮಾಜಿ ಸದಸ್ಯರಾದ ಬಿ.ಜೆ. ದೀಪಕ್, ಬಲ್ಲಾರಂಡ ಮಣಿ ಉತ್ತಪ್ಪ, ಶ್ರೀನಿವಾಸ್, ಪೂರ್ಣಿಮಾ ಗೋಪಾಲ್ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದರು.