ಸೋಮವಾರಪೇಟೆ, ಮಾ. ೭: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆಲ ವಾರ್ಡ್ಗಳಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ರಸ್ತೆ ಸಂಚಾರಕ್ಕೆ ತೊಡಕಾಗಿದೆ ಎಂದು ನಿವಾಸಿಗಳು ದೂರಿದ್ದಾರೆ. ಬೀಡಾಡಿ ದನಗಳು ಹಗಲು ಮತ್ತು ರಾತ್ರಿ ಸಮಯದಲ್ಲಿ ರಸ್ತೆಯಲ್ಲೆ ಮಲಗುವುದು ಹಾಗೂ ಸಂಚರಿಸುವದ ರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಜಾನುವಾರುಗಳ ಮಾಲೀಕರು ತಮ್ಮ ದನಗಳತ್ತ ಗಮನ ಹರಿಸುತ್ತಿಲ್ಲ. ಕೂಡಲೆ ಪಟ್ಟಣ ಪಂಚಾಯಿತಿ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಪವರ್ಹೌಸ್ ರಸ್ತೆ ನಿವಾಸಿ ಮೋಹನ್ ಸೇರಿದಂತೆ ಇತರರು ಒತ್ತಾಯಿಸಿದ್ದಾರೆ.