ಮಡಿಕೇರಿ, ಮಾ. ೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ತಾ. ೧೨ ಮತ್ತು ೧೩ ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ತಾ. ೧೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.