ಸೋಮವಾರಪೇಟೆ, ಮಾ. ೯: ಪ್ರತಿಯೊಬ್ಬರೂ ನೆಲ, ಜಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗೆ ಕಟಿಬದ್ಧರಾಗಬೇಕು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ. ಪ್ರೇಮ್ಕುಮಾರ್ ಹೇಳಿದರು.
ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ವತಿಯಿಂದ ಯಡವನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿರುವ ಎನ್.ಎಸ್.ಎಸ್. ವಾರ್ಷಿಕ ಶಿಬಿರದಲ್ಲಿ ಭಾಗವಹಿಸಿ, "ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆಯ ಪಾತ್ರ" ಕುರಿತು ಅವರು ಉಪನ್ಯಾಸ ನೀಡಿದರು.
ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ದಿಸೆಯಲ್ಲಿ ಯುವಜನತೆ ಹೆಚ್ಚಿನ ಕಾಳಜಿವಹಿಸಿ ಜನರಲ್ಲಿ ಪರಿಸರ ಜಾಗೃತಿ ಮೂಡಿಸಬೇಕು. ಪ್ಲಾಸ್ಟಿಕ್ನಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯದ ಬಗ್ಗೆ ಅರಿವು ಹೊಂದಬೇಕು ಎಂದರು.
ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ವೆಂಕಟನಾಯಕ್ ಮಾತನಾಡಿ, ವಿದ್ಯಾರ್ಥಿಗಳು ಮೌಡ್ಯತೆಯ ವಿರುದ್ಧ ಹೋರಾಡಬೇಕು. ವೈಜ್ಞಾನಿಕ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಚ್.ಜೆ.ಜವರಪ್ಪ ಮಾತನಾಡಿ, ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕತ್ವ ಹಾಗೂ ಸೇವಾ ಮನೋಭಾವ ಬೆಳೆಸಲು ಸಹಕಾರಿಯಾಗಿವೆ ಎಂದರು. ಪಿರಿಯಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಬೆರಳಚ್ಚುಗಾರ ಬಿ.ಟಿ.ರವಿ, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿ ಕೆ.ವಿ. ಉಮೇಶ್, ಎನ್.ಎಸ್.ಎಸ್. ಶಿಬಿರಾಧಿಕಾರಿ ಪ್ರೊ. ಕೆ.ಹೆಚ್. ಧನಲಕ್ಷ್ಮಿ, ಸಹ ಶಿಬಿರಾಧಿಕಾರಿ ಎಂ.ಎಸ್. ಸುನಿಲ್, ಉಪನ್ಯಾಸಕ ಸಚಿನ್ ಕುಮಾರ್ ಅವರು ಉಪಸ್ಥಿತರಿದ್ದರು.