ಮಡಿಕೇರಿ, ಮಾ. ೮: ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ತಾ. ೧೨ ಹಾಗೂ ೧೩ರಂದು ಪ್ರವಾಸಿ ಜಾನಪದ ಲೋಕೋತ್ಸವ ಕಾರ್ಯಕ್ರಮ ನಡೆಯಲಿದೆ.

ರಾಮನಗರದ ಜಾನಪದ ಲೋಕದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಉದ್ಘಾಟಿಸುವರು. ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಟಿ. ತಿಮ್ಮೇಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ರಾಮನಗರ ಶಾಖೆ ಮಠಾಧೀಶರಾದ ಅನ್ನದಾನೇಶ್ವರನಾಥ ಸ್ವಾಮಿ ದಿವ್ಯ ಸಾನಿಧ್ಯ ವಹಿಸುವರು. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎಸ್. ಅಶ್ವತ್ಥನಾರಾಯಣ ಪ್ರಶಸ್ತಿ ವಿತರಣೆ ಮಾಡುವರು ಎಂದು ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಬಿ.ಜಿ. ಅನಂತಶಯನ ತಿಳಿಸಿದ್ದಾರೆ.