ಗೋಣಿಕೊಪ್ಪ ವರದಿ, ಮಾ. ೯: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರದ ಸಾಧನೆಗೆ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಕೊರೊನಾ ಕಾಲದಲ್ಲಿ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭ ತುರ್ತು ಸ್ಪಂದನ ಮೂಲಕ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವಲ್ಲಿ ಸಫಲರಾಗಿರುವ ಗೃಹಿಣಿ ಗೋಣಿಕೊಪ್ಪದ ಮಲ್ಚೀರ ಯಶೋಧ ದೇವಯ್ಯ ಪಡೆದುಕೊಂಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ವಿತರಿಸಿದರು.