ಶನಿವಾರಸಂತೆ, ಮಾ. ೯: ವಿದ್ಯಾರ್ಥಿಗಳು ವಾಹನ ಚಾಲನೆ ಮಾಡುವ ಮೊದಲು ಅಗತ್ಯ ಪರವಾನಗಿ ಹೊಂದಿದ್ದು, ರಸ್ತೆ ಸುರಕ್ಷತೆ ನಿಯಮದ ಕಾನೂನಿನ ಅರಿವನ್ನು ಹೊಂದಿರಬೇಕು ಎಂದು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಬೋಪಣ್ಣ ಹೇಳಿದರು.

ಪಟ್ಟಣದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತಿ ವಿದ್ಯಾಸಂಸ್ಥೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ವತಿಯಿಂದ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರದ ೨ನೇ ದಿನದ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಾಶೇಖರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಮಲ್ಲಿಕಾರ್ಜುನ, ಪ್ರಾಂಶುಪಾಲ ಈ.ಎಂ. ದಯಾನಂದ್, ಶಿಬಿರಾಧಿಕಾರಿ ಎಂ.ಎನ್. ಹರೀಶ್, ಸಹ ನಿರ್ದೇಶಕ ಬಿ.ಎಂ. ಪೊನ್ನಪ್ಪ ಹಾಜರಿದ್ದರು. ಶಿಬಿರಾರ್ಥಿಗಳು ರಾತ್ರಿ ಮನೋರಂಜನಾ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ರಂಜಿಸಿದರು.