ವೀರಾಜಪೇಟೆ, ಮಾ. ೯: ವಿಜ್ಞಾನವು ಬಹಳಷ್ಟು ಮುಂದುವರೆದಿದ್ದು ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕೆಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಮದಲೈಮುತ್ತು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ವೀರಾಜಪೇಟೆ ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ವಿಜ್ಞಾನ ವಿಭಾಗದಲ್ಲಿ ಅವಕಾಶಗಳು ಇದ್ದು, ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಗೋಣಿಕೊಪ್ಪಲಿನ ಕಾವೇರಿ ರಸಾಯನಶಾಸ್ತç ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಪ್ರೊ. ಕೆ.ಬಿ. ಇಂದ್ರಬಾಲ ಮಾತನಾಡಿ, ತಂತ್ರಜ್ಞಾನದ ಬಳಕೆಯಿಂದ ರಾಷ್ಟçದ ಸಮಗ್ರ ಅಭಿವೃದ್ಧಿ ಸಾಧ್ಯ, ಅವಿಶ್ರಾಂತ ಅಭಿವೃದ್ಧಿಗೆ ವಿಜ್ಞಾನದ ಪಾತ್ರ ಅಪಾರವಾಗಿದೆ, ವಿದ್ಯಾರ್ಥಿಗಳು ಸೂಕ್ತ ವೇದಿಕೆಯನ್ನು ಬಳಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ರೆ.ಫಾ. ರೋನಿ ರವಿಕುಮಾರ್ ಮಾತನಾಡಿ, ವಿಜ್ಞಾನದ ಬಳಕೆಯು ನವ ಸಮಾಜದ ನಿರ್ಮಾಣಕ್ಕೆ ಅಡಿಪಾಯವಾಗಿದೆ, ವಿಜ್ಞಾನವು ಅಂಧಕಾರವನ್ನು ತೊಡೆದು ಹಾಕುತ್ತದೆ, ಆದ್ದರಿಂದ ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಪ್ರಸ್ತುತಪಡಿಸಬೇಕೆಂದರು.
ವೇದಿಕೆಯಲ್ಲಿ ಕಾಲೇಜಿನ ಐಕ್ಯೂಎಸಿ ಘಟಕದ ಸಂಚಾಲಕಿ ತೃಪ್ತಿ ಬೋಪಣ್ಣ ಉಪಸ್ಥಿತರಿದ್ದರು. ಈ ಸಂದರ್ಭ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ರಸಾಯನಶಾಸ್ತç ಪ್ರಾಧ್ಯಾಪಕಿ ನಿಶಾ ಸ್ವಾಗತಿಸಿ, ಪ್ರಾಧ್ಯಾಪಕಿ ರಶ್ಮಿ ವಂದಿಸಿದರು. ಈ ಸಂದರ್ಭ ವಿದ್ಯಾರ್ಥಿಗಳಿಂದ ಸಾಂಸ್ಕöÈತಿಕ ಕಾರ್ಯಕ್ರಮಗಳು ನಡೆದವು.