ಮಡಿಕೇರಿ, ಮಾ. ೧೦: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಒಂಟಿ ಮಹಿಳೆಯರು ವಾಸ ಮಾಡುತ್ತಿರುವ ಮನೆಗಳನ್ನು ಗುರಿಯಾಗಿಸಿ ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ನಿಗಾವಹಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ.ಒಂಟಿ ಮನೆ ಹಾಗೂ ಒಂಟಿ ಮಹಿಳೆಯರು ವಾಸಿಸುತ್ತಿರುವ ಮನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದ್ದು, ಗ್ರಾಮ ಗಸ್ತು ವ್ಯವಸ್ಥೆ ಮಾಡಲಾಗಿದೆ. ಮನೆಗಳಿಗೆ ಸಿಸಿಕ್ಯಾಮರಾ ಅಳವಡಿಸಲು ಸೂಚನೆ ನೀಡಲಾಗಿದೆ. ಅಲ್ಲದೆ, ಒಂಟಿ ಮನೆಯಲ್ಲಿ ವಾಸಿಸುತ್ತಿರುವವರು ಬಂದೂಕು ಹೊಂದಿದ್ದಲ್ಲಿ ಬಂದೂಕು ಉಪಯೋಗಿಸಲು ತಿಳುವಳಿಕೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿಂದು ಸದಸ್ಯೆ ವೀಣಾ ಅಚ್ಚಯ್ಯ ಅವರು, ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರೇ ಇರುವ ಮತ್ತು ಒಂಟಿ ಮನೆಗಳ ಮೇಲೆ ಅಪರಿಚಿತರಿಂದ ದಾಳಿ, ಹಲ್ಲೆ, ದರೋಡೆಗಳು ಆಗುತ್ತಿವೆ. ಬಹುತೇಕ ಪ್ರಕರಣಗಳಲ್ಲಿ ಅಸ್ಸಾಮಿಗಳ ಸೋಗಿನಲ್ಲಿರುವ ಬಂಗಾಳಿಗಳೇ ಭಾಗಿಯಾಗಿರುವುದು ಸರಕಾರದ ಗಮನಕ್ಕೆ ಬಂದಿದೆಯೇ? ಎಂದು ಪ್ರಶ್ನೆ ಮಾಡಿದರು.

ಇದಕ್ಕೆ ಉತ್ತರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಈ ಬಗ್ಗೆ ಗಮನಕ್ಕೆ ಬಂದಿರುವುದಿಲ್ಲ. ಅದಾಗ್ಯೂ ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ಹೊರ ರಾಜ್ಯದವರ

ಬಗ್ಗೆ ನಿಗಾವಹಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು

ತಿಳಿಸಿದ್ದಾರೆ.

ಬಂದೂಕು ಉಪಯೋಗಿಸಲು ತಿಳುವಳಿಕೆ

ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಯಾವುದಾದರೂ ಲೈಸೆನ್ಸ್, ಜಮ್ಮಾ ಬಂದೂಕು ಹೊಂದಿದ್ದರೆ ಅವುಗಳ ಮಾಹಿತಿ ಪಡೆದುಕೊಳ್ಳಲಾಗಿದ್ದು ಹಾಗೂ ಅನಿವಾರ್ಯ ಸಂದರ್ಭದಲ್ಲಿ ಅವುಗಳನ್ನು ಉಪಯೋಗಿಸುವ ಬಗ್ಗೆ ಅವರಿಗೆ ಸೂಕ್ತ ತಿಳುವಳಿಕೆ ನೀಡಲಾಗಿರುತ್ತದೆ.

ವಿಳಾಸ ಪರಿಶೀಲನೆ

ಕೊಡಗು ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಕಾಫಿ ತೋಟಗಳಿಗೆ, ಕಟ್ಟಡ, ಹೋಂಸ್ಟೇ, ರೆಸಾರ್ಟ್ ಕೆಲಸಗಳಿಗೆ ಕೂಲಿ ಕಾರ್ಮಿಕರನ್ನು ನೇಮಿಸಿಕೊಳ್ಳುವ ಸಂದರ್ಭದಲ್ಲಿ ಕಾರ್ಮಿಕರ ಗುರುತಿನ ಚೀಟಿಯನ್ನು ಮತ್ತು ಖಾಯಂ ವಿಳಾಸವನ್ನು ಕಡ್ಡಾಯವಾಗಿ ಪಡೆದು ಭಾವಚಿತ್ರ ಗಳೊಂದಿಗೆ ನಿರ್ವಹಿಸು ವಂತೆ ಮತ್ತು ಪೊಲೀಸ್ ಠಾಣೆಗಳಿಗೆ ದಾಖಲಾತಿಗಳ ಮಾಹಿತಿಯನ್ನು ನೀಡುವಂತೆ ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ಅದರಂತೆ ಕಾರ್ಮಿಕರ ಗುರುತಿನ ಚೀಟಿಯನ್ನು ಮತ್ತು ಖಾಯಂ ವಿಳಾಸವನ್ನು ಪಡೆದು ಕೊಂಡು ಪರಿಶೀಲಿಸಲಾಗುತ್ತಿದೆ.

ಕೂಲಿ ಕಾರ್ಮಿಕರುಗಳು ಭಾರತ ದೇಶದ

(ಮೊದಲ ಪುಟದಿಂದ) ಪ್ರಜೆಗಳಾಗಿದ್ದು, ಅಸ್ಸಾಂ ಹಾಗೂ ಇತರೆ ಈಶಾನ್ಯ ಮತ್ತು ಉತ್ತರ ಭಾರತದ ರಾಜ್ಯಗಳ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಗಳನ್ನು ಹೊಂದಿರುವುದು ಕಂಡು ಬಂದಿರುತ್ತದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಗಸ್ತು ವ್ಯವಸ್ಥೆ

ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಒಂಟಿ ಮಹಿಳೆಯರು ವಾಸ ಮಾಡಿಕೊಂಡಿರುವ ಮನೆಗಳಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಸಲುವಾಗಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕ್ರಮಕೈಗೊಳ್ಳಲಾಗಿದೆ.

ಪ್ರತೀ ಠಾಣಾ ವ್ಯಾಪ್ತಿಯಲ್ಲಿ ಒಂಟಿ ಮಹಿಳೆಯರು ವಾಸಿಸುತ್ತಿರುವ ಮನೆಗಳ ಮಾಹಿತಿ ಸಂಗ್ರಹಿಸಿ ಅವರ ಮನೆಗಳಿಗೆ ಬೀಟ್ ಪಾಯಿಂಟ್ ಪುಸ್ತಕ ಇಡಲಾಗಿರುತ್ತದೆ. ಗ್ರಾಮ ಗಸ್ತಿಗೆ ಸಿಬ್ಬಂದಿಯವರನ್ನು ನೇಮಿಸಿ ಕಳುಹಿಸುವಾಗ ಸಿಬ್ಬಂದಿಯವರು ಅವರ ಗಸ್ತಿನ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಒಂಟಿ ಮಹಿಳೆಯರ ಮನೆಗಳಿಗೆ ಭೇಟಿ ನೀಡಿ ಅವರ ಸಮಸ್ಯೆಗಳ ಬಗ್ಗೆ ವಿಚಾರಿಸಿಕೊಂಡು ಬೀಟ್ ಪುಸ್ತಕದಲ್ಲಿ ನಮೂದಿಸಿಕೊಳ್ಳುವಂತೆ ತಿಳುವಳಿಕೆ ನೀಡಲಾಗಿರುತ್ತದೆ.

ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರ ಮನೆಗಳಿಗೆ ತೆರಳಿ ಅವರಿಗೆ ಬೀಟ್ ಸಿಬ್ಬಂದಿಯವರ, ಪೊಲೀಸ್ ಠಾಣೆಯ, ಸಂಬAಧಪಟ್ಟ ಠಾಣೆ, ಪಿಎಸ್‌ಐ, ಪಿಐ ಅವರ ಹಾಗೂ ದೂರವಾಣಿ ಸಂಖ್ಯೆಗಳನ್ನು ನೀಡಲಾಗಿದ್ದು, ಹಾಗೂ ಅವರುಗಳ ದೂರವಾಣಿ ಸಂಖ್ಯೆಯನ್ನು ಪಡೆದುಕೊಳ್ಳಲಾಗಿರುತ್ತದೆ ಎಂದು ಮಾಹಿತಿ ನೀಡಿದರು.ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಅವರ ಮನೆಗಳಿಗೆ, ಸಿಸಿ ಟಿವಿ ಅಳವಡಿಸಿಕೊಳ್ಳಲು ಸೂಕ್ತ ತಿಳುವಳಿಕೆ ನೀಡಲಾಗಿರುತ್ತದೆ. ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರಿಗೆ ಅವರ ಮನೆಗಳಲ್ಲಿ ಕೆಲಸಕ್ಕೆ ಯಾರಾನ್ನಾದರೂ ಇಟ್ಟುಕೊಂಡಿದ್ದರೆ ಅವರ ಬಗ್ಗೆ ಮಾಹಿತಿ ಮತ್ತು ಅವರ ಗುರುತಿನ ಚೀಟಿಯನ್ನು ಪಡೆದು ಠಾಣೆಗೆ ನೀಡುವಂತೆ ತಿಳಿಸಲಾಗಿರುತ್ತದೆ.

ರಾತ್ರಿ ಗಸ್ತಿಗೆ ಸಿಬ್ಬಂದಿಯವರನ್ನು ನೇಮಿಸುವಾಗ ಅವರವರ ಬೀಟ್ ವ್ಯಾಪ್ತಿಯಲ್ಲಿರುವ ಒಂಟಿ ಮಹಿಳೆಯರು ವಾಸಿಸುವ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿಕೊಂಡು ಪಾಯಿಂಟ್ ಪುಸ್ತಕಗಳಲ್ಲಿ ಸಹಿ ಮಾಡುವ ಬಗ್ಗೆ ಸೂಕ್ತ ತಿಳುವಳಿಕೆ ನೀಡಲಾಗಿದ್ದು, ಹಾಗೂ ನೈಟ್ ರೌಂಡ್ಸ್ ಅಧಿಕಾರಿಗಳು ಸಹ ಭೇಟಿ ಮಾಡಿ ಪರಿಶೀಲಿಸಲಾಗುತ್ತಿರುತ್ತದೆ. ಕೊಡಗು ಜಿಲ್ಲೆಯಲ್ಲಿ ಇಖSS-೧೧೨ (ಇmeಡಿgeಟಿಛಿಥಿ ಖesಛಿue Sಥಿsಣem Seಡಿviಛಿe) ತುರ್ತು ಸ್ಪಂದನಾ ವಾಹನ ವ್ಯವಸ್ಥೆ ಜಾರಿಯಲ್ಲಿದ್ದು, ದಿನದ ೨೪ ಗಂಟೆಯೂ ಕರ್ತವ್ಯ ನಿರ್ವಹಿಸಲಾಗುತ್ತಿರುತ್ತದೆ. ಜಿಲ್ಲೆಯಲ್ಲಿ ಒಟ್ಟು ೫೬೦ ಗ್ರಾಮಗಳಲ್ಲಿ ಗ್ರಾಮ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿಗಳನ್ನು ನೇಮಿಸಿ ಕರ್ತವ್ಯ ನಿರ್ವಹಿಸಲಾಗುತ್ತಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.